ಬೆಂಗಳೂರು: ನಕಲಿ ಪಡಿತರ ಚೀಟಿ ಹೊಂದಿದವರನ್ನು ಪತ್ತೆ ಹಚ್ಚಿ ಕೊಟ್ಟವರಿಗೆ ರೂ. 400 ಬಹುಮಾನ ನೀಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಘೋಷಿಸಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರ ನಡೆಯುತ್ತಿದ್ದು, ನಕಲಿ ಪಡಿತರ ಚೀಟಿ ಪಡೆವರ ಬಗ್ಗೆ ಮಾಹಿತಿ ನೀಡಿದವರಿಗೆ ರೂ. 400 ಬಹುಮಾನ ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನ್ಯಾಯಬೆಲೆ ಅಂಗಡಿಗಳ ತಪಾಸಣೆಗೆ ಮೂರು ಮಂದಿ ಸದಸ್ಯರ ಸಮಿತಿ ರಚಿಸಲಾಗಿದೆ. ಕಾಳಸಂತೆಯಲ್ಲಿ ಧಾನ್ಯಗಳನ್ನು ಮಾರಾಟ ಮಾಡುವವರ ಬಗ್ಗೆ ವೆಬ್ಸೈಟ್ನಲ್ಲಿ ದೂರುಗಳನ್ನು ನೀಡಬಹುದು. ದೂರುದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಪಡಿತರ ಚೀಟಿ ಜೊತೆ ಆಧಾರ್ ಸಂಖ್ಯೆ ನೀಡಲು ಜೂ.30 ಕೊನೆಯ ದಿನವಾಗಿದ್ದು, ನೀಡದಿದ್ದಲ್ಲಿ ತಾತ್ಕಾಲಿಕವಾಗಿ ತಡೆಹಿಡಿಯಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.