ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆಗೆ ತೀವ್ರ ಪ್ರಯತ್ನ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಜೊತೆ ಚರ್ಚಿಸಲು ಗುರುವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ.
ಹೈಕಮಾಂಡ್ನ ಅನುಮತಿ ಪಡೆದಲ್ಲಿ ಜೂನ್ 20ರ ಒಳಗೆ ಸಂಪುಟ ಪುನಾರಚನೆ ಸಾಧ್ಯವಿದ್ದು, ಬುಧವಾರ ಮಂತ್ರಿ ಪರಿಷತ್ನ ಸಭೆಯಲ್ಲಿ ಪಕ್ಷದ ಸದಸ್ಯರ ಸಮ್ಮುಖದಲ್ಲಿ ಸಂಪುಟ ಪುನಾರಚನೆಗೆ ನಿರ್ಧರಿಸಿದ್ದಾರೆ.
ಹೈಕಮಾಂಡ್ನ ವರಿಷ್ಠರೊಂದಿಗೆ ಸಭೆಯಲ್ಲಿ ಚರ್ಚಿಸಲಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಹಾಗೂ ಅಹ್ಮದ್ ಪಟೇಲ್ ಅವರೊಂದಿಗೂ ಚರ್ಚೆ ನಡೆಸಲಿದ್ದಾರೆ. ವರಿಷ್ಠರ ಒಪ್ಪಿಗೆ ಪಡೆದಲ್ಲಿ ಅಂತಿಮ ಪಟ್ಟಿ ತಯಾರಿಸಲಿದ್ದು ಶುಕ್ರವಾರ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಸಂಪುಟದಲ್ಲಿ ಸೇರಿಸಬೇಕಾದ ಮತ್ತು ಕೈ ಬಿಡಬೇಕಾದವರ ಬಗ್ಗೆಯೂ ಚರ್ಚಿಸಲಿದ್ದಾರೆ.
ಹೈಕಮಾಂಡ್ನ ವರಿಷ್ಠರೊಂದಿಗೆ ಮಾತುಕತೆ ನಡೆಸಿ ಸೋನಿಯಾ ಗಾಂಧಿ ಅವರು ಅಂತಿಮ ಪಟ್ಟಿಗೆ ಒಪ್ಪಿಗೆ ನೀಡುವ ಕುರಿತು ನಿರ್ಧರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.