ವಾಷಿಂಗ್ಟನ್: ಅಮೆರಿಕದ ಪ್ರಧಾನ ಸರ್ಜನ್ ಜನರಲ್ ಆಗಿ ಭಾರತೀಯ ಮೂಲದ ವೈದ್ಯ ಡಾ.ವಿವೇಕ್ ಮೂರ್ತಿ (37) ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಅವರಿಗೆ ಉಪ ಅಧ್ಯಕ್ಷ ಜೋ ಬಿಡನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಭಗದ್ಗೀತೆ ಹೆಸರಿನಲ್ಲಿ ಮೂರ್ತಿ ಪ್ರಮಾಣ ವಚನ ಸ್ವೀಕರಿಸಿದರು.
ಮೂರ್ತಿಯವರು ಕನ್ನಡಿಗರಾಗಿದ್ದು, ಮಂಡ್ಯ ಜಿಲ್ಲೆಯ ಹಲ್ಲೆಗೆರೆ ಮೂಲದವರಾಗಿದ್ದಾರೆ. ಮುಂದಿನ ನಾಲ್ಕು ವರ್ಷದ ಅವಧಿಯವರೆಗೆ ಮೂರ್ತಿ ಈ ಹುದ್ದೆಯನ್ನು ನಿಭಾಯಿಸಲಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ‘ಸರ್ಜನ್ ಜನರಲ್ ಹುದ್ದೆಯು ಅತ್ಯಂತ ಶ್ರೇಷ್ಠವಾದ ಗೌರವ ಮತ್ತು ಅಷ್ಟೇ ಗಂಭೀರವಾದ ಜವಾಬ್ದಾರಿ. ಈ ಅವಕಾಶ ನೀಡಿದ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಕೃತಜ್ಞತೆ’ ಎಂದು ಹೇಳಿದರು.
ಅಮೆರಿಕದ ಇತಿಹಾಸದಲ್ಲಿಯೇ ಪ್ರಧಾನ ಸರ್ಜನ್ ಸ್ಥಾನವನ್ನು ಅಲಂಕರಿಸಿದ ಅತಿ ಚಿಕ್ಕ ವಯಸ್ಸಿನವರು ಎಂಬ ಹೆಗ್ಗಳಿಕೆಗೂ ಮೂರ್ತಿ ಪಾತ್ರರಾಗಿದ್ದಾರೆ. ಅಲ್ಲದೇ ಅಮೆರಿಕಾದಲ್ಲಿ ಭಾರತೀಯ ಮೂಲದ ವ್ಯಕ್ತಿಗೆ ಸಿಗುತ್ತಿರುವ ಉನ್ನತ ಮಟ್ಟದ ಗೌರವ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.