ಬಂಟ್ವಾಳ; ಗ್ರಾಮೀಣ ಪ್ರದೇಶದ ನಿವೇಶನ ರಹಿತ ಬಡಕುಟುಂಬಗಳಿಗೆ ನಿವೇಶನ ಒದಗಿಸುವಲ್ಲಿ ಸ್ಥಳೀಯ ಗ್ರಾಮಪಂಚಾಯತ್ ಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು, ಸಾಮಾಜಿಕ ನ್ಯಾಯದ ಪರಿಕಲ್ಪನೆ ತಳಮಟ್ಟದಿಂದಲೇ ಬಲಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಬಾಳ್ತಿಲ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಬುಧವಾರ ಗ್ರಾಮಭೇಟಿ ನಡೆಸಿದ ಸಚಿವರು, 94 ಸಿಯ ಹಕ್ಕುಪತ್ರಗಳನ್ನು ವಿತರಿಸಿದ ಬಳಿಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು. ಹಿಂದೆ ಪ್ರತೀ ಗ್ರಾಮಗಳಲ್ಲಿ 10ರಿಮದ 15 ಮಂದಿ ಜಮೀನು ಪಟ್ಟಾದಾರರಿದ್ದರು. ಆದರೆ ಭೂ ಸುದಾರಣೆಯಂತಹಾ ಕಾನೂನುಗಳು ಇಂದು ಸಹಸ್ರ ಸಂಖ್ಯೆಯ ಪಟ್ಟಾದಾರರನ್ನು ಸೃಷ್ಟಿಸಿದೆ. ಇದರ ಹಿಂದೆ ಸರ್ಕಾರಗಳ ಇಚ್ಛಾಶಕ್ತಿ ಅಡಗಿದೆ ಎಂದ ಅವರು ಇಂದು ನಿವೇಶನ ಹೊಂದಿದ ಕುಟುಂಬಗಳು ಈ ಇತಿಹಾಸವನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾ.ಪಂ. ಅಧ್ಯಕ್ಷ ಸುಂದರ್ ಸಾಲಿಯಾನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅಬ್ಬಾಸ್ ಆಲಿ, ಗ್ರಾ.ಪಂ. ಉಪಾಧ್ಯಕ್ಷೆ ನೇತ್ರಾವತಿ, ಗ್ರಾ.ಪಂ ಸದಸ್ಯರಾದ ಬಿ.ಕೆ ಅಣ್ಣುಪೂಜಾರಿ, ಕೃಷ್ಣಪ್ಪ ಪೂಜಾರಿ, ಸುರೇಶ್ ಶೆಟ್ಟಿ, ಲೋಲಾಕ್ಷಿ, ದಿವ್ಯನಾಯಕ್, ತಾ.ಪಂ.ಸಹಾಯಕ ನಿರ್ದೇಶಕಿ ದಯಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ಸಮನ್ವಯಾಧಿಕಾರಿ ರಾಜೇಶ್, ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಪುಷ್ಪಾವತಿ, ಕಾರ್ಯದರ್ಶಿ ಅಶೋಕ್ ಕುಮಾರ್, ಕಂದಾಯ ನಿರೀಕ್ಷಕ ನಾಯಾಣ ಪೂಜಾರಿ, ರಾಮಪ್ಪ ಪೂಜಾರಿ ಉಪಸ್ಥಿರಿದ್ದರು.
ಇದೇ ವೇಳೆ ಸಚಿವರು ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಕೃಷಿಭೂಮಿ ಸಂರಕ್ಷಣಾ ಯೋಜನೆಯಡಿ 5 ಲಕ್ಷ ವೆಚ್ಚದಲ್ಲಿ ಸಣ್ಣಕುಕ್ಕು ಎಂಬಲ್ಲಿ ನಿರ್ಮಾಣ ಗೊಳ್ಳಲಿರುವ ತಡೆಗೋಡೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.