ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರ ಸಂಖ್ಯೆಯನ್ನು ಹೆಚ್ಚು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಸಾರ್ವಜನಿಕ ಮತ್ತು ಖಾಸಗಿ ವಲಯ ಎರಡರಲ್ಲೂ ಆನ್ಲೈನ್ನಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದ ಅಭ್ಯರ್ಥಿಗಳ ಅಂಕಗಳನ್ನು ಪ್ರಕಟಿಸುವ ನಿರ್ಧಾರ ಮಾಡಲಾಗಿದೆ. ಆದರೆ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ಬಹಿರಂಗಪಡಿಸಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವ ಅವಕಾಶವನ್ನೂ ನೀಡಲಾಗಿದೆ. ಒಪ್ಪಿಗೆ ಇದ್ದರೆ ಅಷ್ಟೇ ಬಹಿರಂಗ ಮಾಡಲಾಗುತ್ತದೆ.
ನೀತಿ ಆಯೋಗದ ಈ ಬಗೆಗಿನ ಶಿಫಾರಸ್ಸಿಗೆ ಕೇಂದ್ರ ಅನುಮೋದನೆ ನೀಡಿದೆ. ನಿರುದ್ಯೋಗಿಗಳು ಉದ್ಯೋಗ ಪಡೆಯುವ ಅವಕಾಶದತ್ತ ಬರಲಿ ಎಂಬ ಕಾರಣಕ್ಕೆ ಅಭ್ಯರ್ಥಿಗಳ ಅಂಕ, ರ್ಯಾಂಕಿಂಗ್ಗಳನ್ನು ಸಾರ್ವಜನಿಕಗೊಳಿಸಲಾಗುತ್ತಿದೆ ಎಂದು ವೈಯಕ್ತಿಕ ಮತ್ತು ತರಬೇತಿ ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.