ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಪುಟವನ್ನು ಯಾವಾಗ ಪುನರ್ರಚನೆಗೊಳಿಸುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಈಗಾಗಲೇ ಹಲವಾರು ಬಾರಿ ಇಂದು ಸಂಪುಟ ಪುನರ್ ರಚನೆ, ನಾಳೆ ಪುನರ್ರಚನೆ ಎಂಬ ಸುದ್ದಿಗಳು ಬಿತ್ತರಗೊಂಡು ನಿರಾಸೆ ಮೂಡಿಸಿದೆ.
ಆದರೆ ಇದೀಗ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಜುಲೈ 4 ಅಥವಾ 5ರಂದು ಮೋದಿ ಸಂಪುಟ ಪುನರ್ ರಚನೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.
ನೂತನವಾಗಿ ಸಂಪುಟ ಸೇರುವ ಸಚಿವರ ಪ್ರಮಾಣವಚನಕ್ಕಾಗಿ ರಾಷ್ಟ್ರಪತಿ ಭವನದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿಯವರ ಆಫ್ರಿಕಾ ಪ್ರವಾಸದ ಮುಂಚಿತವಾಗಿ ಇದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಉತ್ತರಪ್ರದೇಶದ ಅತ್ಯಧಿಕ ಮಂದಿ ಸಂಪುಟ ಸೇರುವ ಸಾಧ್ಯತೆ ಇದ್ದು, ಕಳಪೆ ಸಾಧನೆ ಮಾಡಿದವರು ಸಂಪುಟದಿಂದ ಹೊರ ಹೋಗಬೇಕಾದ ಅನಿವಾರ್ಯತೆ ಇದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.