ನವದೆಹಲಿ: ಸಂಪುಟ ಪುನರ್ರಚನೆಯ ವದಂತಿಗಳ ನಡುವೆಯೇ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಚಿವ ಸಂಪುಟದ ಸಚಿವರನ್ನು ಭೇಟಿಯಾಗಿ, ವಿವಿಧ ಸಚಿವಾಲಯಗಳ ಸಾಧನೆ, ಯೋಜನೆ, ಅಭಿವೃದ್ಧಿ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಮತ್ತು ವಿತ್ತ ಸಚಿವ ಅರುಣ್ ಜೇಟ್ಲಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಮರುದಿನವೇ ಮೋದಿ ಸಚಿವ ಸಂಪುಟವನ್ನು ಭೇಟಿಯಾಗಿದ್ದಾರೆ. ಇದರಿಂದ ಸಂಪುಟ ಪುನರ್ರಚನೆ ನಡೆಯುವುದು ಸ್ಪಷ್ಟವಾಗಿದೆ.
ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮೋದಿ ಪ್ರಾದೇಶಿಕ ಪ್ರಾಮುಖ್ಯತೆಯ ಮೇರೆಗೆ ಸಂಪುಟವನ್ನು ಪುನರ್ರಚನೆಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.