ಸುಳ್ಯ : ಬದುಕಿನ ಸವಾಲುಗಳನ್ನು ಎದುರಿಸಲು ನಮ್ಮನ್ನು ಪಠ್ಯೇತರ ಚಟುವಟಿಕೆಗಳು ಸಜ್ಜುಗೊಳಿಸುತ್ತವೆ. ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳು ನಮ್ಮನ್ನು ಸರ್ವತೋಮುಖವಾಗಿ ಬೆಳೆಸುತ್ತದೆ. ವಿವಿಧ ಸಂಘಗಳ ಮೂಲಕ ಹಲವು ಚಟುವಟಿಕೆಗಳನ್ನು ಹಮ್ಮಿಕೊಂಡು, ಅವುಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ. ಈ ದೀಪ ಬೆಳಗಿದಂತೆ ಶಾಲಾ ಸಂಘಗಳು ಮತ್ತು ವಿದ್ಯಾರ್ಥಿಗಳ ಜೀವನ ಬೆಳಗಲಿ ಎಂದು ಸುಳ್ಯದ ಖ್ಯಾತ ಸ್ತ್ರೀರೋಗ ತಜ್ಞರಾದ ಡಾ. ವೀಣಾ ಇವರು ಹೇಳಿದರು.
ಅವರು ದಿನಾಂಕ 30-06-2016 ರಂದು ಸ್ನೇಹ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಡಾ. ಚಂದ್ರಶೇಖರ ದಾಮ್ಲೆಯವರು ಮಾತನಾಡಿ ಸ್ವ ಸಾಮರ್ಥ್ಯದಿಂದ ನಿಶ್ಚಿತ ಚೌಕಟ್ಟನ್ನು ಮೀರಿ ಕಲಿತಾದ ನಮ್ಮ ಬೆಳವಣಿಗೆಯಾಗುವುದು ಎಂದರು. ವೇದಿಕೆಯಲ್ಲಿ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಶ್ರೀಮತಿ ಸ್ವರ್ಣಲತಾ ಬಾರ್ಯ ಉಪಸ್ಥಿತರಿದ್ದು ಶುಭ ಹಾರೈಸಿದರು. ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಹಿತ ನುಡಿದರು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿ ಕು. ದಿವ್ಯಾ ಕೆ ಸ್ವಾಗತಿಸಿ, ಶಿಕ್ಷಕ ರಘುರಾಮ ಭಟ್ ಸಿ. ವಂದಿಸಿದರು. ಶಿಕ್ಷಕಿ ಸವಿತಾ ಎಂ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.