ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪಾಲಿಸಿಗಳನ್ನು ಟೀಕಿಸುವುದರಲ್ಲೇ ನಿರತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇದೀಗ ಮೋದಿಯ ಹೆಜ್ಜೆಯನ್ನೇ ಅನುಸರಿಸಿ ಜನರಿಗೆ ಹತ್ತಿರವಾಗಲು ಪ್ರಯತ್ನಿಸುತ್ತಿದ್ದಾರೆ.
ಮೋದಿಯವರ ‘ಮನ್ ಕೀ ಬಾತ್’ ರೇಡಿಯೋ ಕಾರ್ಯಕ್ರಮದಂತೆ ಇದೀಗ ಕೇಜ್ರಿವಾಲ್ ಅವರು ‘ಟಾಕ್ ಟು ಎಕೆ’ ಕಾರ್ಯಕ್ರಮವನ್ನು ಆರಂಭಿಸಲು ಮುಂದಾಗಿದ್ದಾರೆ.
ಜುಲೈ 17ರ ಭಾನುವಾರ ’ಟಾಕ್ ಟು ಎಕೆ’ ಕಾರ್ಯಕ್ರಮ ರೇಡಿಯೋದಲ್ಲಿ ಪ್ರಸಾರಗೊಳ್ಳಲಿದೆ.
ಇದೊಂದು ಸಮಾಲೋಚನಾ ಕಾರ್ಯಕ್ರಮವಾಗಿದ್ದು, ಮೋದಿಯವರ ಮನ್ ಕೀ ಬಾತ್ನಂತೆ ಏಕಮುಖವಾದುದಲ್ಲ ಎಂದು ಆಮ್ ಆದ್ಮಿ ಪಕ್ಷ ಹೇಳಿಕೊಂಡಿದೆ.
ಜನರು wwww.talktoak.com, ಲಾಗ್ ಆನ್ ಆಗಿ, ಕಾಲ್ ಮಾಡಿ ಕೇಜ್ರಿವಾಲ್ಗೆ ಪ್ರಶ್ನೆಗಳನ್ನು ಕೇಳಬಹುದಾಗಿದೆ. ಮಾಸಿಕ ಕಾರ್ಯಕ್ರಮ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.