ಬೆಂಗಳೂರು : ಡಿವೈಎಸ್ಪಿ ಗಣಪತಿ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಡಿವೈಎಸ್ಪಿ ಗಣಪತಿಯವರ ಮರಣ ಪೂರ್ವ ಹೇಳಿಕೆಯನ್ನು ಪರಿಗಣಿಸಿ ಗೃಹಸಚಿವ ಜಾರ್ಜ್ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದರೆ, ಸರ್ಕಾರ ಮಾತ್ರ ಜಾರ್ಜ್ ಬೆಂಬಲಕ್ಕೆ ನಿಂತಿದೆ. ಸರ್ಕಾರದ ಹಟ ಮತ್ತು ಪ್ರತಿಪಕ್ಷಗಳ ಹೋರಾಟದಿಂದಾಗಿ ವಿಧಾನ ಪರಿಷತ್ ಮತ್ತು ವಿಧಾನ ಸಭಾ ಕಲಾಪಕ್ಕೆ ನಿರಂತರ ತಡೆಯುಂಟಾಗುತ್ತಿದೆ.
ಇಂದು ಕೂಡಾ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ತೀವ್ರ ಧರಣಿ ನಡೆಸಿದ್ದು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿವೆ.
ಸೋನಿಯಾ, ರಾಹುಲ್ ಈಗಲಾದರೂ ಕಣ್ಣು ಬಿಡಿ ಎಂದು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಭಿತ್ತಿಪತ್ರ ಪ್ರದರ್ಶನ ಮಾಡಿದ್ದಾರೆ.
ಬಳಿಕ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಯಿತು.
ಇಡೀ ಜನತೆ ಜಾರ್ಜ್ ರಾಜೀನಾಮೆ ನೀಡಬೇಕು ಎಂಬುದರ ಪರವಾಗಿದ್ದಾರೆ. ತನಿಖೆ ಮುಗಿಯುವವರೆಗಾದರೂ ಜಾರ್ಜ್ ತಮ್ಮ ಸ್ಥಾನದಿಂದ ಕೆಳಗಿಳಿಯಬೇಕು. ತನಿಖೆ ಮುಗಿದ ಬಳಿಕ ನಿರಪರಾಧಿ ಎಂದು ಸಾಬೀತಾದರೆ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಪ್ರತಿಪಕ್ಷಗಳು ಸರಕಾರಕ್ಕೆ ಕಿವಿಮಾತು ಹೇಳಿವೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ತನ್ನ ನಿಲುವಿಗೆ ಅಂಟಿಕೊಂಡಿದ್ದು ಜಾರ್ಜ್ ರಾಜೀನಾಮೆ ಪಡೆಯಲು ಹಿಂದೇಟು ಹಾಕುತ್ತಿದ್ದು ಅವರನ್ನು ರಕ್ಷಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.