ಮಡಿಕೇರಿ : ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಡಿವೈಎಸ್ಪಿ ಗಣಪತಿ ಅವರ ಪ್ರಕರಣ ಇದೀಗ ಮತ್ತೊಂದು ಹಂತ ತಲುಪಿದೆ. ಈ ವಿಷಯದಲ್ಲಿ ಮಧ್ಯ ಪ್ರವೇಶ ಮಾಡುವಂತೆ ಗಣಪತಿಯವರ ಪತ್ನಿ ಪಾವನಾ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.
ಡಿವೈಎಸ್ಪಿ ಗಣಪತಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ಮತ್ತು ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ. ಆದರೆ ನ್ಯಾಯಯುತ ತನಿಖೆ ನಡೆಯುವ ಬಗ್ಗೆ ನನಗೆ ಭರವಸೆ ಇಲ್ಲ. ಹೀಗಾಗಿ ತಾವು ಮಧ್ಯಪ್ರವೇಶಿಸಿ ನಮ್ಮ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಅವರು ಪ್ರಧಾನಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಪತ್ರಕ್ಕೆ ಪ್ರಧಾನಿಯಿಂದ ಯಾವ ರೀತಿಯ ಸ್ಪಂದನೆ ದೊರೆಯುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.