ನವದೆಹಲಿ: ಉತ್ತರ ಭಾರತದಾದ್ಯಂತ ಇಂದು ಸಂಭವಿಸಿದ ಭೂಕಂಪನಕ್ಕೆ ಒಟ್ಟು 17 ಮಂದಿ ಬಲಿಯಾಗಿದ್ದಾರೆ. ಬಿಹಾರದಲ್ಲಿ 14 ಮಂದಿ, ಉತ್ತರಪ್ರದೇಶದಲ್ಲಿ 7 ಮಂದಿ ಮತ್ತು ಪಶ್ಚಿಮ ಬಂಗಾಳದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭೂಕಂಪದಿಂದ ಉಂಟಾದ ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸುವ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಢಿ ಅವರಿಗೆ ವಹಿಸಿದ್ದಾರೆ.
ಅಲ್ಲದೇ ಅವರು ಭೂಕಂಪದ ಬಗ್ಗೆ ಚರ್ಚೆ ನಡೆಸುವ ಸಲುವಾಗಿ ಉನ್ನತ ಸಚಿವರುಗಳ, ಹಿರಿಯ ಅಧಿಕಾರಿಗಳ ತುರ್ತು ಸಭೆಯನ್ನೂ ಕರೆದಿದ್ದಾರೆ.
‘ನೇಪಾಳ ಗಡಿಭಾಗವಾದ ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಉತ್ತರಪ್ರದೇಶ, ಬಿಹಾರದಲ್ಲಿ ಒಟ್ಟು 16 ಮಂದಿ ಮೃತರಾಗಿದ್ದಾರೆ. ಪಶ್ಚಿಮಬಂಗಾಳದಲ್ಲಿ ಒರ್ವ ಮೃತನಾಗಿ 50 ಮಂದಿ ಗಾಯಗೊಂಡಿದ್ದಾರೆ. ಬಿಹಾರದ ಹಲವು ಕಡೆಗಳಲ್ಲಿ ವಿದ್ಯುತ್ ಸ್ಥಗಿತಗೊಂಡಿದ್ದು, ದೂರವಾಣಿ ಸಂಪರ್ಕ ಕೂಡ ಸಿಗುತ್ತಿಲ್ಲ’ ಎಂದು ರೂಢಿ ತಿಳಿಸಿದ್ದಾರೆ.
7.9 ತೀವ್ರತೆಯ ಭೂಕಂಪ ಇಂದು ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಕಡೆಗಳಲ್ಲಿ ಸಂಭವಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.