ಬೆಂಗಳೂರು : ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ. ಜೆ. ಜಾರ್ಜ್ ಮತ್ತು ಇತರ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮಡಿಕೇರಿಯ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ ಸೋಮವಾರ ಪೊಲೀಸರಿಗೆ ಆದೇಶಿಸಿದೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೂ ಮುನ್ನ ನೀಡಿದ ಹೇಳಿಕೆಯಂತೆ ಪೊಲೀಸ್ ಅಧಿಕಾರಿಗಳಾದ ಮೊಹಂತಿ ಮತ್ತು ಪ್ರಸಾದ್ ವಿರುದ್ಧವೂ ಎಫ್ಐಆರ್ ದಾಖಲಿಸಲು ಸೂಚಿಸಲಾಗಿದೆ.
ಈ ಬೆಳವಣಿಗೆಯ ಬಗ್ಗೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ತುರ್ತು ಸಭೆ ನಡೆಸಿದ್ದಾರೆ. ಈ ಸಭೆಯಿಂದ ಜಾರ್ಜ್ ಹೊರ ನಡೆದಿದ್ದಾರೆ ಎನ್ನಲಾಗಿದೆ.
ಇದೀಗ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಾಗಿರುವುದರಿಂದ ಸರ್ಕಾರ ಅವರ ರಾಜೀನಾಮೆಯನ್ನು ಪಡೆಯುವುದು ಬಹುತೇಕ ಖಚಿತ. ಮೂಲಗಳ ಪ್ರಕಾರ ನಾಳೆ ಬೆಳಿಗ್ಗೆ ೧೦ ಗಂಟೆಗೆ ಅವರ ತಲೆದಂಡವಾಗುವ ಸಾಧ್ಯತೆ ಇದೆ.
ಕೋರ್ಟ್ ನೀಡಿದ ಇಂದಿನ ಆದೇಶ ಜಾರ್ಜ್ ಸಮರ್ಥನೆಗೆ ನಿಂತಿದ್ದ ಸರ್ಕಾರಕ್ಕೆ ತೀವ್ರ ಮುಜುಗರವನ್ನು ಉಂಟು ಮಾಡಿದೆ.
ಜಾರ್ಜ್ ರಾಜೀನಾಮೆ ನೀಡುವುದು ಸೂಕ್ತ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅಭಿಪ್ರಾಯಿಸಿದ್ದಾರೆ.
ಜಾರ್ಜ್ ಅವರನ್ನು ಸ್ಥಾನದಿಂದ ಕಿತ್ತು ಹಾಕಿ ಅವರ ವಿರುದ್ಧ ತನಿಖೆ ನಡೆಸುವಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.