ಮುಂಬೈ : ಮಹಾರಾಷ್ಟ್ರದ ಊನಾದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಪ್ರಕರಣದಿಂದ ತೀವ್ರ ಆಘಾತಕ್ಕೆ ಒಳಗಾಗಿರುವ ದಲಿತ ಸಮುದಾಯದ ಸಾವಿರಾರು ಮಂದಿ ಇದೀಗ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದ್ದಾರೆ.
ಹಿಂದೂ ಧರ್ಮದಲ್ಲಿ ನಮ್ಮನ್ನು ಸಮಾನವಾಗಿ ಕಾಣಲಾಗುತ್ತಿಲ್ಲ. ಹೀಗಿರುವಾಗ ಆ ಧರ್ಮದಲ್ಲಿ ಮುಂದುವರೆಯುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ದಲಿತ ಮುಖಂಡರು ಹೇಳಿಕೊಂಡಿದ್ದಾರೆ.
ಜುಲೈ 31 ರಂದು ಅಹ್ಮದಾಬಾದ್ನಲ್ಲಿ ಬೃಹತ್ ಸಮಾರಂಭವೊಂದನ್ನು ಏರ್ಪಡಿಸಿ ಅಲ್ಲಿ ತಮ್ಮ ಚಳವಳಿಯ ರೂಪರೇಷೆಗಳ ಬಗ್ಗೆ ಘೋಷಣೆ ಮಾಡಲು ವಿವಿಧ ದಲಿತ ಸಂಘಟನೆಗಳು ಮುಂದಾಗಿವೆ.
ಊನಾದಲ್ಲಿ ದಲಿತರ ಮೇಲೆ ಅತಿ ಅಮಾನುಷ ರೀತಿಯಲ್ಲಿ ಹಲ್ಲೆ ನಡೆದಿದೆ. ಹಿಂದೂ ಧರ್ಮದಲ್ಲಿ ದಲಿತರನ್ನು ಇನ್ನೂ ಕೀಳಾಗಿ ಕಾಣಲಾಗುತ್ತಿದೆ. ಅವರ ವಿರುದ್ಧ ತಾರತಮ್ಯದ ಧೋರಣೆ ಅನುಸರಿಸಲಾಗುತ್ತಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ ಎಂದು ದಲಿತ ಮುಖಂಡರೊಬ್ಬರು ಹೇಳಿದ್ದಾರೆ.
ಬನಸಕ್ತಾ ಜಿಲ್ಲೆಯ ಸಾವಿರಾರು ದಲಿತರು ಈಗಾಗಲೇ ಧಾರ್ಮಿಕ ಮತಾಂತರಕ್ಕೆ ತಮ್ಮ ಅನುಮತಿ ಇರುವುದಾಗಿ ಅರ್ಜಿಯೊಂದನ್ನು ಸಿದ್ಧಪಡಿಸಿದ್ದು ಅದನ್ನು ಸರಕಾರಕ್ಕೆ ಶೀಘ್ರದಲ್ಲೇ ಸಲ್ಲಿಕೆ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.