ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ಅವರ ಅಧ್ಯಕ್ಷತೆಯಲ್ಲಿ 22 ಸದಸ್ಯರ ವಿಶೇಷ ಸಮಿತಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮಾನದಂಡ ರಚಿಸಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಸಮಿತಿ ರಚನೆಗೆ ಜುಲೈ 26 ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಸಮಿತಿಯು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರೊ. ಮರುಳಸಿದ್ದಯ್ಯ, ಚಲನಚತ್ರ ನಿರ್ದೇಶಕ ನಾಗಾಭರಣ, ಕ್ರೀಡಾಪಟು ಮಾಲತಿ ಹೊಳ್ಳ ಮತ್ತಿತರರನ್ನು ಹೊಂದಿದೆ.
ರಾಜ್ಯೋತ್ಸವ ಪ್ರಶಸ್ತಿ ಪಡೆಯುವವರು ಯಾವ ಅರ್ಹತೆ ಹೊಂದಿರಬೇಕು ಮತ್ತಿತರ ವಿಷಯಗಳ ಮಾನದಂಡಗಳನ್ನು ಸಮಿತಿ ರಚಿಸಿ ಸಲ್ಲಿಸಬೇಕು ಎಂದು ನ್ಯಾ. ಎಸ್. ಅಬ್ದುಲ್ ನಜೀರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಹೇಳಿದೆ. ಸಮಿತಿ ಎರಡು ವಾರದಲ್ಲಿ ಸಭೆ ಸೇರಿ ತೀರ್ಮಾನ ಕೈಗೊಂಡು ಹೈಕೋರ್ಟ್ಗೆ ಸೂಚಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
ಸಾಹಿತಿ ಸತ್ಯನಾರಾಯಣ ರಾವ್ ಅವರು ರಾಜ್ಯೋತ್ಸವ ಪ್ರಶಸ್ತಿ ನೀಡಲು ಸೂಕ್ತ ಮಾರ್ಗಸೂಚಿ ಇಲ್ಲ. ಸತ್ಯನಾರಾಯಣ ಅವರು ಈವರೆಗೆ 90 ಕೃತಿಗಳನ್ನು ರಚಿಸಿದ್ದು, ತಮಗೆ ಕಳೆದ ಮೂರು ವರ್ಷಗಳಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿಲ್ಲ. ಇದಕ್ಕೆ ಮಾರ್ಗಸೂಚಿ ತಯಾರಿಸುವಂತೆ ಸರ್ಕಾರ ಅಧಿಸೂಚನೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.