ಬೆಂಗಳೂರು: ವೇತನ ಹೆಚ್ಚಿಸುವಂತೆ ಕೋರಿ ಕೆಎಸ್ಆರ್ಟಿಸಿ ನೌಕರರು ೩ ದಿನಗಳ ಮುಷ್ಕರವನ್ನು ಬುಧವಾರವಷ್ಟೇ ಹಿಂಪಡೆದಿದ್ದು, ಇದೀಗ ಮಹದಾಯಿ ನದಿ ನೀರು ವಿವಾದದ ತೀರ್ಪಿನ ವಿರುದ್ಧ ಜುಲೈ 30ರಂದು ಕರ್ನಾಟಕ ಬಂದ್ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ.
ಮಹದಾಯಿ ನದಿಯಿಂದ ಮಲಪ್ರಭಾ ನದಿಗೆ 7.56 ಟಿಎಂಸಿ ನೀರು ಬಿಡುಗಡೆ ಮಾಡುವಲ್ಲಿ ಕರ್ನಾಟಕ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಾಧಿಕರಣ ಪೀಠ ಬುಧವಾರ ತಿರಸ್ಕರಿಸಿದೆ.
ಕನ್ನಡ ಚಳುವಳಿ ವಾಟಾಳ್ ಪಕ್ಷ ಹಾಗೂ ಕನ್ನಡ ಪರ ಸಂಘಟನೆಯ ವೇದಿಕೆಯಾಗಿರುವ ಕನ್ನಡ ಒಕ್ಕೂಟದ ಮುಖಂಡ ವಾಟಾಳ್ ನಾಗರಾಜ್ ಅವರು ಕರ್ನಾಟಕ ಬಂದ್ಗೆ ಸಹಕರಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.
ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಅವರು ಕನ್ನಡ ಚಿತ್ರ ಮಂಡಳಿ ಬಂದ್ಗೆ ಸಂಪೂರ್ಣ ಬೆಂಬಲ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ.
ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಮಹದಾಯಿ ನದಿಯ ಕಳಸಾ-ಬಂಡೂರಿ ಉಪನದಿಗಳ ಸುತ್ತ ಅಣೆಕಟ್ಟು ನಿರ್ಮಿಸುವ ವಿಚಾರದಲ್ಲಿ ಕರ್ನಾಟಕ-ಗೋವಾ ರಾಜ್ಯಗಳ ನಡುವೆ ವಿವಾದ ಉಂಟಾಗಿತ್ತು.
ನ್ಯಾಯಾಧಿಕರಣ ಪೀಠದ ತೀರ್ಪನ್ನು ವಿರೋಧಿಸಿ ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಗದಗ, ನವಲಗುಂದ, ನರಗುಂದ, ಬೆಳಗಾವಿ ಮತ್ತಿತರ ಜಿಲ್ಲೆಗಳಲ್ಲಿ ಪ್ರಟಿಭಟನೆಗಳು ನಡೆದಿದ್ದು, ಹಲವು ಸರ್ಕಾರಿ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಇನ್ನು ಹಲವೆಡೆ ಶಾಲಾ ಮಕ್ಕಳು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಗಳು ನಡೆದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.