ನವದೆಹಲಿ : ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ವ್ಯಾಟಿಕನ್ನಲ್ಲಿ ನಡೆಯಲಿರುವ ಮದರ್ ತೆರೆಸಾ ಅವರಿಗೆ ‘ಸಂತ’ ಪದವಿ ಪ್ರದಾನ ಮಾಡಲಿರುವ ಕಾರ್ಯಕ್ರಮಕ್ಕೆ ವ್ಯಾಟಿಕನ್ಗೆ ಭಾರತೀಯ ನಿಯೋಗ ತೆರಳಲಿದ್ದು ಇದರ ನೇತೃತ್ವವನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಹಿಸಿಕೊಳ್ಳಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಪ್ರಾಮುಖ್ಯತೆಗೆ ಅನುಗುಣವಾಗಿ ನಾವು ಮದರ್ ತೆರೆಸಾ ಸಂತ ಪದವಿ ಪ್ರದಾನ ಸಮಾರಂಭಕ್ಕೆ ಭೇಟಿ ಕೊಡುತ್ತಿದ್ದೇವೆ. ಭಾರತ ಸರ್ಕಾರದ ನಿಯೋಗದ ನೇತೃತ್ವವನ್ನು ಸುಷ್ಮಾ ಸ್ವರಾಜ್ ವಹಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.
ಸೆಪ್ಟೆಂಬರ್ 4 ರಂದು ವ್ಯಾಟಿಕನ್ನಲ್ಲಿ ಪೋಪ್ ಫ್ರಾನ್ಸಿಸ್ ಅವರು ಮದರ್ ತೆರೆಸಾ ಅವರನ್ನು ’ಸೈಂಟ್’ ಎಂದು ಘೋಷಿಸಲಿದ್ದಾರೆ. ಮದರ್ ತೆರೆಸಾ ಅವರ ಪುಣ್ಯತಿಥಿಯಂದೇ ಈ ಸಮಾರಂಭವನ್ನು ಏರ್ಪಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.