ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಸಂಬಂಧಿಸಿ ಮಹದಾಯಿ ನ್ಯಾಯಾಧಿಕರಣ ನೀಡಿರುವ ತೀರ್ಪನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಹಲವು ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಹಲವೆಡೆ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಲಾಗಿದ್ದು, ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ. ಕೆಎಸ್ಆರ್ಟಿಸಿ, ವಾಯವ್ಯ ಸಾರಿಗೆ, ಬಿಎಂಟಿಸಿ ಬಸ್ ನೌಕರರು ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.
ಖಾಸಗಿ ಶಾಲಾ ಆಡಳಿತ ಮಂಡಳಿ ರಜೆ ನೀಡಿದ್ದು, ಉಳಿತ ಶಾಲೆಗಳಿಗೆ ರಜೆ ನೀಡುವುದು ಜಿಲ್ಲಾಧಿಕಾರಿಗೆ ಬಿಟ್ಟ ವಿಚಾರ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್ಸಿಸಿ) ಇಂದು ಚಿತ್ರಮಂದಿರಗಳಲ್ಲಿ ಸಿನಿಮಾ ಸ್ಕ್ರೀನಿಂಗ್, ಚಿತ್ರ ಚಿತ್ರೀಕರಣ, ಮತ್ತಿತರ ಚಟುವಟಿಕೆಗಳನ್ನು ಸ್ಥಗಿತಗೊಂಳಿಸಿದೆ.
ಗುರುವಾರದಂದು ಹುಬ್ಬಳ್ಳಿ-ಧಾರವಾಡ, ಗದಗ, ಹಾವೇರಿ, ಮಂಡ್ಯ, ಮೈಸೂರು, ಹಾಸನ, ತುಮಕೂರು, ಬೆಂಗಳೂರುಗಳಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದು, ಅಂಗಡಿ-ಮುಗ್ಗಟ್ಟುಗಳು ಮುಚ್ಚಲಾಗಿದೆ. ಬಸ್ಸುಗಳು ರಸ್ತೆಗಿಳಿದಿಲ್ಲ.
ಹುಬ್ಬಳ್ಳಿಯಲ್ಲಿ ರೈತ ಮುಖಂಡರು ಘೋಷಣೆಗಳನ್ನು ಕೂಗಿದ್ದು, ಕನ್ನಡ ಪರ ಸಂಘಟನೆಗಳು ಶಾಸಕ ಕೋನರೆಡ್ಡಿ ನೇತೃತ್ವದಲ್ಲಿ ಅಣುಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯಲ್ಲಿ ಜನರು ಸ್ವಯಂಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿದರೆ, ತುಕೂರಿನಲ್ಲಿ ಕನ್ನಡ ಪರ ಸಂಘಟನೆಗಳು ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ಶಾಲಾ ಮಕ್ಕಳು ಕೂಡ ಬೆಂಬಲ ನೀಡಿದರೆ, ಮಂಡ್ಯದಲ್ಲಿ ಉರುಳು ಸೇವೆ ನಡೆಸಲಾಗಿದೆ. ಕರವೇ ಕಾರ್ಯಕರ್ತರು ಟೈರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.