ನವದೆಹಲಿ : ನೆರೆಪೀಡಿತ ಅಸ್ಸಾಂಗೆ ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಅವರು ಶನಿವಾರ ಭೇಟಿ ಕೊಡಲಿದ್ದು, ಅಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜ್ಜು, ಸಚಿವ ಜಿತೇಂದ್ರ ಸಿಂಗ್ ಅವರು ರಾಜ್ನಾಥ್ ಅವರಿಗೆ ಸಾಥ್ ನೀಡಲಿದ್ದಾರೆ.
ನೆರೆಯಿಂದ ತೀವ್ರ ಹಾನಿಗೊಳಗಾಗಿರುವ ನಾಗೌನ್ ಮತ್ತು ಮಾರಿಗೌನ್, ಕಾಜಿರಂಗ ನ್ಯಾಷನಲ್ ಪಾರ್ಕ್ನಲ್ಲಿ ಸಚಿವರು ಪರಿಸ್ಥಿತಿಯ ಅವಲೋಕನ ನಡೆಸಲಿದ್ದಾರೆ.
ಮಾರಿಗೌನ್ ಜಿಲ್ಲೆಯಲ್ಲಿ ನೆರೆಯಿಂದ ಸಂತ್ರಸ್ತರಾದ ಜನರನ್ನು ಭೇಟಿಯಾಗಿ ಸಾಂತ್ವಾನ ಹೇಳಲಿದ್ದಾರೆ.
ಬಳಿಕ ಸಿಂಗ್ ಅವರು ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನಾವಾಲ್ ಮತ್ತು ರಾಜ್ಯದ ಇತರ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಅಸ್ಸಾಂನ ನೆರೆಗೆ ಇದುವರೆಗೆ ಒಟ್ಟು 21 ಮಂದಿ ಬಲಿಯಾಗಿದ್ದು, ಒಂದು 18 ಲಕ್ಷ ಜನರು ಸಮಸ್ಯೆಗೀಡಾಗಿದ್ದಾರೆ. 22 ಜಿಲ್ಲೆಗಳ 3374 ಗ್ರಾಮಗಳು ಜಲಾವೃತಗೊಂಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.