ನವದೆಹಲಿ: ದೇಶದ ಶೇ. 30 ರಷ್ಟು ಸಾರ್ವಜನಿಕ ವಲಯಗಳ ಬ್ಯಾಂಕುಗಳು ಹಾಗೂ ಶೇ. 10 ರಷ್ಟು ಖಾಸಗಿ ಬ್ಯಾಂಕುಗಳ ಎಟಿಎಂಗಳು ವಿವಿಧ ತಾಂತ್ರಿಕ ಸಮಸ್ಯೆಗಳಿಂದ ಅಥವಾ ನಗದು ಹಣವಿಲ್ಲದೆ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರ್ಬಿಐ ಸಮೀಕ್ಷೆ ತಿಳಿಸಿದೆ.
ಹಣಕಾಸು ಸಚಿವಾಲಯ ರಾಜ್ಯ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಆರ್ಬಿಐ ಇತ್ತೀಚೆಗೆ ಮೆಟ್ರೋ, ನಗರ ಮತ್ತು ಗ್ರಾಮೀಣ ಪ್ರದೇಶಗಳ ಸುಮಾರು 4000 ಎಟಿಎಂಗಳ ಪ್ರಾತಿನಿಧಿಕ ಮಾದರಿಯ ಸಮೀಕ್ಷೆ ನಡೆಸಿದ ವರದಿಯನ್ನು ಲೋಕಸಭೆಗೆ ಲಿಖಿತ ವರದಿ ನೀಡಿದ್ದಾರೆ.
ಸಮೀಕ್ಷೆ ವೇಳೆ 600 ಸಾರ್ವಜನಿಕ ಹಾಗೂ 100 ಖಾಸಗಿ ಎಟಿಎಂಗಳು ತಾಂತ್ರಿಕ ದೋಷ, ನೆಟ್ವರ್ಕ್ ಸಮಸ್ಯೆ, ವಿದ್ಯುತ್ ವೈಫಲ್ಯ, ನಗದು ಹಣ ದೊರಕದೇ ಇರುವುದು ಇತ್ಯಾದಿ ಸಮಸ್ಯೆಗಳು ಕಂಡು ಬಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.