ಕಠ್ಮಂಡು: ನೇಪಾಳ ಮೂಲದ ಬಾಲಕಿ 13 ವರ್ಷದ ಗೌರಿಕಾ ಸಿಂಗ್ ರಿಯೋ ಒಲಿಂಪಿಕ್ಸ್ನ ಈಜು ವಿಭಾಗದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆದಿದ್ದಾಳೆ.
ಗೌರಿಕಾ ಸಿಂಗ್ ಈ ಹಿಂದೆ ರಷ್ಯಾ ಮತ್ತು ಕಝಾನದಲ್ಲಿ ನಡೆದ ವಿಶ್ವ ಚಾಂಪಿಯನ್ಶಿಪ್ನ 100 ಮೀ. ಬ್ಯಾಕ್ಸ್ಟ್ರೋಕ್ನಲ್ಲಿ ಪದಕ ಗೆದ್ದುಕೊಂಡಿದ್ದಾಳೆ. ಇಂಗ್ಲೆಂಡ್ ಕ್ಲಬ್ನಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿಕೊಂಡಿರುವ ಗೌರಿಕಾ ರಿಯೋ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸುವ ಅತೀ ಕಿರಿಯ ಸ್ಪರ್ಧಿಯಾಗಿದ್ದಾಳೆ.
2016ರ ಫೆಬ್ರವರಿಯಲ್ಲಿ ಭಾರತದಲ್ಲಿ ನಡೆದ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲೂ ಈಕೆ ಬೆಳ್ಳಿ ಪದಕ ಜಯಿಸಿದ್ದಾಳೆ. ರಿಯೋ ಒಲಿಂಪಿಕ್ಸ್ನಲ್ಲೂ ಪದಕ ಗೆಲ್ಲುವ ವಿಶ್ವಾಸವನ್ನು ಆಕೆಯ ಪೋಷಕರು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.