ಕಾಸರಗೋಡು : ತುಳುನಾಡಿನಲ್ಲಿ ಹಿಂದಿನಿಂದಲೂ ನಾಗದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ನಾಗರಪಂಚಮಿ ಪ್ರಯುಕ್ತ ಕಾಸರಗೋಡಿನ ಹದಿನೆಂಟು ಪೇಟೆದೇವಳವಾದ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಆಗಸ್ಟ್ 7 ರಂದು ಸಾವಿರಾರು ಭಕ್ತರು ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಗೆ ಗರುಡಪಂಚಮಿ ಮತ್ತು ನಾಗರ ಪಂಚಮಿ ಎಂದು ಹೆಸರಿದೆ.
ಶ್ರಾವಣ ಮಾಸದ ಮೊದಲ ಹಬ್ಬವೇ ನಾಗರ ಪಂಚಮಿ. ನಾಗರ ಹಾವು, ಹುತ್ತಗಳಿಗೆ ಹಾಲು ಎರೆದು ಪೂಜೆ ಮಾಡುವುದರ ಮೂಲಕ ಬಹಳ ವಿಶೇಷವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಶ್ರಾವಣ ಶುಕ್ಲ ಪಂಚಮಿ ತಿಥಿಯಂದು ಆರಂಭವಾಗುವ ನಾಗರ ಪಂಚಮಿಯ ವಿಶೇಷ.
ನಾಗರ ಪಂಚಮಿಯಂದು ಅಕ್ಕಿ, ತೆಂಗಿನಕಾಯಿ ಇಟ್ಟು ನಾಗರ ಕಲ್ಲಿಗೆ ಪಂಚಾಮೃತ ಅಭಿಷೇಕ ಮಾಡಿ ಆರಾಧಿಸುವ ಸಂಪ್ರದಾಯವಿದೆ. ಮಂಜೇಶ್ವರದಲ್ಲಿ ನಾಗಪಂಚಮಿಯಂದು ಸಾವಿರಾರು ಭಕ್ತರು ಆಗಮಿಸಿ ಶ್ರದ್ಧಾ ಭಕ್ತಿಯಿಂದ ದೇವರಿಗೆ ಪೂಜೆ ಸಲ್ಲಿಸಿದರು. ಬೆಳಗ್ಗೆಯಿಂದ ಸಾವಿರಾರು ಭಕ್ತಾದಿಗಳು ಮಂಜೇಶ್ವರದ ಅನಂತೇಶ್ವರ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಆವರಣದಲ್ಲಿರುವ ನಾಗರಕಟ್ಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಮಾಡಿದರು.
ಶ್ರೀ ದೇವಳದಲ್ಲಿ ಬೆಳಗಿನಿಂದ ವೈದಿಕ ವಿಧಿ ವಿಧಾನಗಳೊಂದಿಗೆ ಕಾರ್ಯಕ್ರಮಗಳು ಜರಗಿದವು. ಬಳಿಕ ಮಧ್ಯಾಹ್ನ ಮಹಾಪೂಜೆ ಬಳಿಕ ಶ್ರೀ ದೇವರಿಗೆ ವಿಶೇಷ ವಾಸುಕಿ ಪೂಜೆ ನೆರವೇರಿತು.
ದೂರ-ದೂರದಿಂದ ಬಂದರು ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಬಂಟ್ವಾಳ, ಪುತ್ತೂರು, ಕಾರ್ಕಳ, ಉಡುಪಿ, ಕುಂದಾಪುರ, ಹಾಸನ, ಮಡಿಕೇರಿ, ಮುಂಬೈ, ದೆಹಲಿ, ಮುಂತಾದ ಪ್ರದೇಶಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.