ಜಮ್ಮು ಕಾಶ್ಮೀರ : ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿಯ ಹತ್ಯೆಯ ಬಳಿಕ ಕಾಶ್ಮೀರದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಒಟ್ಟು 3,300 ಭದ್ರತಾ ಪಡೆಯ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.
ಜುಲೈ 8 ರಂದು ಎನ್ಕೌಂಟರ್ ಮೂಲಕ ಬುರ್ಹಾನ್ ವಾನಿಯನ್ನು ಹತ್ಯೆ ಮಾಡಲಾಗಿತ್ತು. ಆ ಬಳಿಕ ಕಾಶ್ಮೀರದ ವಿವಿಧೆಡೆ ಒಟ್ಟು 1 ಸಾವಿರ ಹಿಂಸಾಚಾರ ಘಟನೆಗಳು ನಡೆದಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜುಲೈ 2016 ರ ಬಳಿಕ 3,329 ಜಮ್ಮು ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಅರೆಸೇನಾ ಸಿಬ್ಬಂದಿ ಪಡೆಗಳು ಕಣಿವೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುತ್ತಿದ್ದಾರೆ. ಹಿಂಸಾಚಾರದಿಂದ 3 ಸಾವಿರ ಸಿಬ್ಬಂದಿಗಳಿಗೆ ಗಾಯಗಳಾಗಿದ್ದು, ಕೆಲವರಿಗೆ ತೀವ್ರ ಸ್ವರೂಪದ ಗಾಯಗಳಿಂದ ಬಳಲುತ್ತಿದ್ದರೆ, ಇನ್ನು ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. 3 ಪೊಲೀಸರು ಹತರಾಗಿದ್ದಾರೆ.
ವಿವಿಧ ಕಡೆಗಳಲ್ಲಿ ಒಟ್ಟು 1,030 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಘಟನೆಗಳಲ್ಲಿ 21 ಪೊಲೀಸ್ ಸ್ಟೇಷನ್, ಪೊಲೀಸ್ ಪೋಸ್ಟ್ ಮತ್ತು ಸರಕಾರಿ ಕಟ್ಟಡಗಳು ಸುಟ್ಟು ಭಸ್ಮವಾಗಿವೆ. 51 ಕಛೇರಿಗಳು ಭಾಗಶಃ ಹಾನಿಗೊಳಗಾಗಿವೆ.
1 ಸಾವಿರ ಆರೋಪಿಗಳನ್ನು ಈವರೆಗೆ ಬಂಧಿಸಲಾಗಿದ್ದು, ಇದರಲ್ಲಿ ಶೇ. 52 ರಷ್ಟು ಮಂದಿ ಯುವಕರಾಗಿದ್ದಾರೆ.
ಹಿಂಸಾಚಾರದಲ್ಲಿ ಒಟ್ಟು 5 ಸಾವಿರ ನಾಗರಿಕರಿಗೆ ಗಾಯಗಳಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.