ನವದೆಹಲಿ : ಸೌದಿ ಅರೇಬಿಯಾದಲ್ಲಿ ಉದ್ಯೋಗವನ್ನು ಕಳೆದುಕೊಂಡಿರುವ ಭಾರತೀಯರು ಶೀಘ್ರದಲ್ಲೇ ತಾಯ್ನಾಡಿಗೆ ಮರಳಬೇಕು ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕರೆ ನೀಡಿದ್ದಾರೆ.
ತಮ್ಮ ಮಾಲೀಕರಿಂದ ಬಾಕಿ ಇರುವ ವೇತನವನ್ನು ಪಡೆಯಲು ಅರ್ಜಿ ಹಾಕಿ ಭಾರತಕ್ಕೆ ಮರಳಿ. ನಿಮ್ಮ ಹಿಂದಿರುಗುವಿಕೆಯ ಪ್ರಯಾಣದ ಖರ್ಚು ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.
ಬಾಗಿಲು ಮುಚ್ಚಿರುವ ಕಂಪೆನಿಗಳೊಂದಿಗೆ ಕೇಂದ್ರ ಸರ್ಕಾರ ಚರ್ಚೆ ನಡೆಸುವ ಭರವಸೆಯನ್ನು ನೀಡಿದೆ. ಆ ಬಳಿಕವಷ್ಟೇ ನಿಮ್ಮ ವೇತನ ಮರುಪಾವತಿಯಾಗಲಿದೆ. ಈ ಪ್ರಕ್ರಿಯೆಗೆ ಸಾಕಷ್ಟು ಸಮಯ ತಗಲುವ ಸಾಧ್ಯತೆ ಇರುವುದರಿಂದ ಇದಕ್ಕಾಗಿ ಅಲ್ಲಿ ಕಾಯುವುದರಲ್ಲಿ ಯಾವುದೇ ಅರ್ಥವಿಲ್ಲ. ಹೀಗಾಗಿ ಭಾರತಕ್ಕೆ ಮರಳಿ ಎಂದು ಸರಣಿ ಟ್ವೀಟ್ಗಳ ಮೂಲಕ ಸುಷ್ಮಾ ಹೇಳಿದ್ದಾರೆ.
ಸೌದಿಯಲ್ಲಿ ಉದ್ಯೋಗ ಕಳೆದುಕೊಂಡ ಭಾರತೀಯರ ಮನವಿಯ ಮೇರೆಗೆ ಕಳೆದ ತಿಂಗಳು ಸೌದಿಗೆ ತೆರಳಿದ್ದ ವಿದೇಶಾಂಗ ಸಚಿವಾಲಯದ ರಾಜ್ಯ ಖಾತೆ ಸಚಿವ ಜ. ವಿ. ಕೆ. ಸಿಂಗ್ ಅಲ್ಲಿನ ಸರ್ಕಾರದೊಂದಿಗೆ ಭಾರತೀಯರ ಸಂಕಷ್ಟಗಳ ಬಗ್ಗೆ ಚರ್ಚೆ ನಡೆಸಿದ್ದರು.
ಮಾತುಕತೆಯ ಫಲವಾಗಿ ಅಲ್ಲಿನ ಸರ್ಕಾರ ಭಾರತೀಯರಿಗೆ ಉಚಿತವಾಗಿ ತೆರಳುವ ವ್ಯವಸ್ಥೆಯನ್ನು ಮಾಡಿಕೊಡುವುದಾಗಿ ಮತ್ತು ಅವರ ಬಾಕಿ ಇರುವ ವೇತನದ ವಿಷಯವನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿತ್ತು.
ತೈಲ ಬೆಲೆ ಕುಸಿತ ಕಂಡ ಹಿನ್ನಲೆಯಲ್ಲಿ ಸೌದಿ ಆರ್ಥಿಕತೆಯೂ ಕುಸಿತವಾಗಿದೆ. ಈ ಹಿನ್ನಲೆಯಲ್ಲಿ ಅಲ್ಲಿನ ಹಲವಾರು ಕಂಪೆನಿಗಳು ಬಾಗಿಲು ಮುಚ್ಚಿವೆ. ಇದರಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ಭಾರತೀಯರು ಈಗ ನಿರುದ್ಯೋಗಿಗಳಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.