ತಿರುವನಂತಪುರಂ : ಕೇರಳದ ಸ್ಥಾಪನಾ ದಿನವಾದ ನವೆಂಬರ್ 1 ರಂದು ಆ ರಾಜ್ಯವನ್ನು ಬಯಲುಶೌಚ ಮುಕ್ತ ರಾಜ್ಯವನ್ನಾಗಿ ಘೋಷಣೆ ಮಾಡಲಾಗುತ್ತಿದೆ.
ಇದರ ಘೋಷಣೆ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.
ಗುರುವಾರ ತಿರುವನಂತಪುರಂನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಪ್ರಧಾನಿಯವರು ಸ್ವಚ್ಛ ಭಾರತ ಅಭಿಯಾನವನ್ನು ಆರಂಭಿಸಿ ದೇಶದಾದ್ಯಂತ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುತ್ತಿರುವ ಹಿನ್ನಲೆಯಲ್ಲಿ ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲು ಕೇರಳದ ಕಮ್ಯುನಿಸ್ಟ್ ಸರ್ಕಾರ ನಿರ್ಧರಿಸಿದೆ.
ಕೇರಳದ 941 ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ 1.90 ಲಕ್ಷಕ್ಕೂ ಅಧಿಕ ಗ್ರಾಮಗಳಲ್ಲಿ ಶೌಚಾಲಯವನ್ನು ನಿರ್ಮಿಸಲಾಗಿದೆ. ಅಲ್ಲಿನ ರಾಜ್ಯ ಸರ್ಕಾರ ಆರಂಭಿಸಿದ ಶುಚಿತ್ವ ಅಭಿಯಾನದ ಫಲವಾಗಿ ಅಲ್ಲಿನ ಕುಗ್ರಾಮಗಳಲ್ಲೂ ಶೌಚಾಲಯಗಳು ನಿರ್ಮಾಣವಾಗಿವೆ.
ಕೇಂದ್ರದ ಸ್ವಚ್ಛಭಾರತ ಅಭಿಯಾನವನ್ನು ಆಸಕ್ತಿಯಿಂದ ಮುನ್ನಡೆಸಿರುವ ಕೇರಳ ಇದೀಗ ಮಾಲಿನ್ಯ ಮುಕ್ತ ಪರಿಸರ, ಸಾರ್ವಜನಿಕ ನೈರ್ಮಲ್ಯ, ಶುಚಿತ್ವದಲ್ಲಿ ಮಹತ್ತರ ಪ್ರಗತಿಯನ್ನು ಸಾಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.