ನವದೆಹಲಿ : 2014 ರ ಲೋಕಸಭಾ ಚುನಾವಣೆಯಲ್ಲಿ ಸೋತ ಕ್ಷೇತ್ರಗಳ ಮೇಲುಸ್ತುವಾರಿಗೆ ಬಿಜೆಪಿಯು ತನ್ನ ರಾಜ್ಯಸಭಾ ಸದಸ್ಯರನ್ನು ನಿಯೋಜಿಸಲು ಚಿಂತನೆ ನಡೆಸಿದೆ.
2019 ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಸೋತಿರುವ ಕ್ಷೇತ್ರಗಳಲ್ಲಿ ಮತ್ತೆ ಗೆಲ್ಲಲು ಈ ಯೋಜನೆ ರೂಪಿಸಲಾಗುತ್ತಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರೇ ಈ ಆದೇಶವನ್ನು ನೀಡಿದ್ದು, ಅವರ ಸೂಚನೆಯಂತೆ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಸಭಾ ಸದಸ್ಯರಿಗೆ 2014 ರಲ್ಲಿ ಬಿಜೆಪಿ ಸೋತ ಲೋಕಸಭಾ ಕ್ಷೇತ್ರಗಳ ಜವಾಬ್ದಾರಿ ನೀಡಲಿದ್ದಾರೆ.
ಪ್ರಸ್ತುತ ಬಿಜೆಪಿಯ 52 ರಾಜ್ಯಸಭಾ ಸದಸ್ಯರಲ್ಲಿ 12 ಜನರು ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನುಳಿದವರಿಗೆ ಕೆಲ ಕ್ಷೇತ್ರಗಳ ಮೇಲುಸ್ತುವಾರಿ ವಹಿಸಿ, ಈ ಸದಸ್ಯರು ಕೇಂದ್ರ ಸಚಿವರೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಆಯಾ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತೊಡಗಬೇಕು. ಸ್ಥಳೀಯ ಮುಖಂಡರೊಂದಿಗೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಅಲ್ಲಿ ಪಕ್ಷವನ್ನು ಬಲಪಡಿಸಬೇಕು. ಈ ಮೂಲಕ ಆ ಕ್ಷೇತ್ರದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವಂತೆ ಮಾಡಬೇಕು ಎಂಬ ಯೋಜನೆ ಇದಾಗಿದೆ.
2019ರ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದು, ಶತಾಯಗತಾಯ 2014 ರಲ್ಲಿ ಸೋತಿರುವ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಈಗಿನಿಂದಲೇ ಸಿದ್ಧತೆ ಕಾರ್ಯಾರಂಭಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.