ಮಂಗಳೂರು: ಸ್ಥಗಿತಗೊಂಡಿರುವ ಎಂಡೋ ಸಂತ್ರಸ್ತರ ಮಾಶಾಸನ ನೀಡುವುದುಮತ್ತು ನ್ಯಾಯಾಲಯದ ಆದೇಶ ಅನುಷ್ಠಾನಕ್ಕೆ ಆಗ್ರಹಿಸಿ ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರನ್ನುzಶಿಸಿ ಮಾತನಾಡಿದ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಧರ ಗೌಡ, ಸ್ಥಗಿತಗೊಂಡಿರುವ ಮಾಶಾಸನ ತಕ್ಷಣ ಬಿಡುಗಡೆಗೊಳಿಸಬೇಕು ಮತ್ತು ತಿಂಗಳ ಮೊದಲ ವಾರದಲ್ಲೇ ನೀಡಬೇಕು ಎಂದು ಆಗ್ರಹಿಸಿದರು.
ಎಂಡೋ ಸಂತ್ರಸ್ತರಿಗೆ ಪೌಷ್ಠಿಕ ಆಹಾರ ವಿತರಿಸಬೇಕು. ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಈಗಾಗಲೇ ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ನೂತನ ಕಟ್ಟಡ ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕು. ಸಂತ್ರಸ್ತರ ಚಿಕಿತ್ಸೆಗೆ ಆರೋಗ್ಯ ಇಲಾಖೆ ಸಂಚಾರಿ ಆಸ್ಪತ್ರೆಯನ್ನು ನೀಡಿರುವುದಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಪ್ರಕಾರ ಇನ್ನೂ ವ್ಯವಸ್ಥೆ ಸಾಕಾರಗೊಂಡಿಲ್ಲ. ತಕ್ಷಣ ಸಂಚಾರಿ ಆಸ್ಪತ್ರೆ ನೀಡಬೇಕು.
ಮಲಗಿದ್ದಲ್ಲೇ ಇರುವ ಸಂತ್ರಸ್ತರ ಚಿಕಿತ್ಸೆಗಾಗಿ ಗ್ರಾಮಕ್ಕೊಂದು ಸ್ಟಾಫ್ ನರ್ಸ್ ವ್ಯವಸ್ಥೆ ಮಾಡಬೇಕು. ಎಂಡೋ ಸಂತ್ರಸ್ತರಿಗೆ ನ್ಯಾಯಾಲಯದಿಂದ ಬಂದ ಆದೇಶವನ್ನು ತಕ್ಷಣ ಅನುಷ್ಠಾನಗೊಳಿಸಬೇಕು. ಎಂಡೋ ಸಂತ್ರಸ್ತರ ಪಾಲನಾ ಕೇಂದ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿಗಳನ್ನು ನೀಡಬೇಕು. ತಾಲೂಕಿಗೆ ಒಂದು ಶಾಶ್ವತ ಪುನರ್ವಸತಿ ಕೇಂದ್ರ ಒದಗಿಸಬೇಕು. ಎಂಡೋ ಸಂತ್ರಸ್ತರಾಗಿ ಮೃತಪಟ್ಟ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಮರಣೋತ್ತರ ಪರಿಹಾರ ನೀಡಬೇಕು. ಪ್ರತಿ ತಿಂಗಳು ಜಿಲ್ಲಾಸ್ಪತ್ರೆಯಲ್ಲಿ ಎಂಡೋ ಸಂತ್ರಸ್ತರ ಆಯ್ಕೆ ಮಾಡುವ ವೈದ್ಯಕೀಯ ಶಿಬಿರವನ್ನು ನಡೆಸಬೇಕು ಎಂಬ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಈ ಸಂದರ್ಭ ಜಿಲ್ಲಾಧಿಕಾರಿ ಮೂಲಕ ಸಿದ್ಧರಾಮಯ್ಯರಿಗೆ ಸಲ್ಲಿಸಲಾಯಿತು.
ಪ್ರತಿಭಟನಾಕಾರರನ್ನುzಶಿಸಿ ಧರ್ಮೇಂದ್ರ, ಮೋನಪ್ಪ ಭಂಡಾರಿ, ಕೊರಗಪ್ಪ ಗೌಡ, ಕುಶಾಲಪ್ಪ ಮೊದಲಾದವರು ಮಾತನಾಡಿದರು. ಪ್ರತಿಭಟನೆಗೆ ಪುತ್ತೂರು ಎಂಡೋ ವಿರೋಧಿ ಸಮಿತಿ, ಜಯಕರ್ನಾಟಕ ತಾಲೂಕು ಯುವ ಘಟಕ ಬೆಂಬಲ ವ್ಯಕ್ತಪಡಿಸಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.