ನವದೆಹಲಿ : ಸೆಪ್ಟೆಂಬರ್ 18 ರಿಂದ ರಷ್ಯಾ ಹಾಗೂ ಅಮೇರಿಕಾ ದೇಶಗಳಿಗೆ ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಪ್ರವಾಸ ಕೈಗೊಳ್ಳಲಿದ್ದಾರೆ. ಪಾಕಿಸ್ಥಾನದ ನೆರವಿನಿಂದ ಭಾರತದ ಮೇಲೆ ಹಾಗೂ ದಕ್ಷಿಣ ಏಷ್ಯಾದಲ್ಲಿ ನಡೆಯುತ್ತಿರುವ ಭಯೋತ್ಪಾದನೆಯ ವಿಷಯಗಳನ್ನು ಚರ್ಚಿಸುವುದು ಮತ್ತು ಭಯೋತ್ಪಾದನೆಯ ನಿರ್ಮೂಲನೆಗೆ ಬೇಕಾದ ಅಗತ್ಯ ಕ್ರಮಗಳ ಕುರಿತು ಮಾತನಾಡುವುದು ಸೇರಿದಂತೆ ಪಾಕಿಸ್ಥಾನ ಜಮ್ಮು ಕಾಶ್ಮೀರದಲ್ಲಿ ನಡೆಸುತ್ತಿರುವ ಭಯೋತ್ಪಾದನೆಯ ವಿಷಯವನ್ನು ಅಂತಾರಾಷ್ಟ್ರೀಯ ಸಮುದಾಯಕ್ಕೆ ತಿಳಿಸುವುದು ಪ್ರವಾಸದ ಮುಖ್ಯ ಉದ್ದೇಶವಾಗಿದೆ.
ಸೆಪ್ಟೆಂಬರ್ 18 ರಿಂದ 5 ದಿನಗಳ ಕಾಲ ರಷ್ಯಾದಲ್ಲಿದ್ದು ರಷ್ಯಾದ ಆಂತರಿಕ ಭದ್ರತಾ ಸಚಿವ ವ್ಲಾಡಿಮಿರ್ ಕೊಲೊಕೊಲ್ಟ್ ಸೇವ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಭಾರತದ ಗಡಿ ಪ್ರದೇಶದಲ್ಲಿ ಪಾಕಿಸ್ಥಾನದ ಕಡೆಯಿಂದ ನಡೆಯುತ್ತಿರುವ ಭಯೋತ್ಪಾದನೆಯ ಕುರಿತು ಚರ್ಚಿಸಲಿದ್ದು, ಭಯೋತ್ಪಾದನಾ ನಿರ್ಮೂಲನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು.
ಸೆಪ್ಟೆಂಬರ್ 26 ರಿಂದ 7 ದಿನಗಳ ಕಾಲ ಅಮೇರಿಕಾಗೆ ತೆರಳಲಿರುವ ರಾಜ್ನಾಥ್ ಸಿಂಗ್ ಅವರು ಅಲ್ಲಿನ ಗೃಹಸಚಿವ ಜೇಹ್ ಚಾರ್ಲ್ಸ್ ಜಾನ್ಸನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇಲ್ಲಿಯೂ ಕೂಡಾ ಇಸಿಸ್ ಉಗ್ರ ಸಂಘಟನೆ, ಪಾಕಿಸ್ಥಾನ ಬೆಂಬಲಿತ ಭಯೋತ್ಪಾದನೆ ಕುರಿತಂತೆ ಚರ್ಚಿಸಲಿದ್ದಾರೆ. ಗುಪ್ತಚರ ಮಾಹಿತಿ ಹಂಚಿಕೆ, ವಾಂಟೆಡ್ ಕ್ರಿಮಿನಲ್ ಪಟ್ಟಿ ಹಂಚಿಕೆ, ವೀಸಾ ಉದಾರೀಕರಣ ನೀತಿ ಸೇರಿದಂತೆ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.