ನಾಗ್ಪುರ: ಪತಂಜಲಿ ಸಂಸ್ಥೆಯು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಲಗ್ಗೆ ಇಡಲು ತಯಾರಿ ನಡೆಸಿದ್ದು, ಶೀಘ್ರದಲ್ಲೇ ಸ್ವದೇಶಿ ಜೀನ್ಸ್ಗಳನ್ನು ಬಿಡುಗಡೆ ಮಾಡಲಿದೆ.
ಯೋಗ ಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಸಂಸ್ಥೆಯು ಈಗಾಗಲೇ ಆಹಾರ ಉತ್ಪನ್ನ, ನೈಸರ್ಗಿಕ, ಆಯುರ್ವೇದ ಇನ್ನಿತರ ಉತ್ಪನ್ನಗಳನ್ನು ಬಿಡುಗಡೆ ಮಾಡಿ, ಈಗಾಗಲೇ ಅಂತಾರಾಷ್ಟ್ರೀಯ ಮಾರುಕಟ್ಟೆಗೂ ಲಗ್ಗೆ ಇಟ್ಟಿದೆ.
ಗಾರ್ಮೆಂಟ್ಸ್ ಕ್ಷೇತ್ರದಲ್ಲಿ ಪತಂಜಲಿ ಬ್ರಾಂಡ್ನ್ನು ಪರಿಚಯಿಸುವ ಸಲುವಾಗಿ ಸ್ವದೇಶಿ ಜೀನ್ಸ್ಗಳನ್ನು ಮಾರುಕಟ್ಟೆಗೆ ಮುಂದಿನ ವರ್ಷದ ವೇಳೆಗೆ ಬಿಡುಗಡೆ ಮಾಡಲಾಗುವುದು. ಯುವಜನರಿಂದ ಜೀನ್ಸ್ಗೆ ಹೆಚ್ಚು ಬೇಡಿಕೆ ಇದ್ದು ಇದನ್ನು ಸ್ವದೇಶಿಗೊಳಿಸಲು ಮಾರುಕಟ್ಟೆಗೆ ಬಿಡುಗಡೆ ಮಾಡಿ ವಿದೇಶಿ ಬ್ರಾಂಡ್ಗಳಿಗೆ ಪೈಪೋಟಿ ನೀಡಲಿದ್ದೇವೆ ಎಂದು ಪತಂಜಲಿ ಸಂಸ್ಥೆಯ ಸ್ಥಾಪಕ ಬಾಬಾ ರಾಮ್ದೇವ್ ಹೇಳಿದ್ದಾರೆ.
ಈಗಾಗಲೇ ನೇಪಾಳ, ಬಾಂಗ್ಲಾ ದೇಶಗಳಲ್ಲಿ ಪತಂಜಲಿ ಘಟಕಗಳನ್ನು ಸ್ಥಾಪಿಸಲಾಗಿದೆ. ಪತಂಜಲಿ ಉತ್ಪನ್ನಗಳನ್ನು ಮಧ್ಯಪ್ರಾಚ್ಯ ದೇಶಗಳಿಗೂ ಕಳುಹಿಸಲಾಗುತ್ತಿದ್ದು ಅಲ್ಲಿ ಕೂಡಾ ಪತಂಜಲಿ ಉತ್ಪನ್ನಗಳು ಜನಪ್ರಿಯತೆಯನ್ನು ಗಳಿಸಿದೆ. ಕೆಲವೊಂದು ಫಾಸ್ಟ್ ಮೂವಿಂಗ್ ಕನ್ಸೂಮರ್ ಪ್ರಾಡೆಕ್ಟ್ಗಳ ಇನ್ನಿತರ ದೇಶಗಳ ಮಾರುಕಟ್ಟೆಗೂ ಲಗ್ಗೆ ಇಡಲಿದ್ದೇವೆ ಎಂದು ಬಾಬಾ ರಾಮ್ದೇವ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.