ಬಂಟ್ವಾಳ: ಇಲ್ಲಿನ ತುಂಬೆಯ ಬಿ.ಎ. ಕೈಗಾರಿಕಾ ತರಬೇತಿ ಸಂಸ್ಥೆ ಮುಂದಿನ ಶೈಕ್ಷಣಿಕ ವರ್ಷದಿಂದ ವೆಲ್ಡಿಂಗ್ ಕೋರ್ಸ್ನ್ನು ಪ್ರಾರಂಭಿಸಲಿದೆ ಎಂದು ಬಿ.ಎ. ಸಂಸ್ಥೆಯ ಆಡಳಿತ ನಿರ್ದೇಶಕ ಅಬ್ದುಲ್ ಸಲಾಂ ತಿಳಿಸಿದ್ದಾರೆ.
ಬಿ.ಎ. ಕೈಗರಿಕಾ ತರಬೇತಿ ಸಂಸ್ಥೆಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಸ್ತುತ ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಎ.ಸಿ. ಮೆಕ್ಯಾನಿಕ್ ಮತ್ತು ಡಿಸೆಲ್ ಮೆಕ್ಯಾನಿಕ್ ವಿಭಾಗಗಳಲ್ಲಿ ತರಬೇತಿ ನೀಡುತ್ತಿದೆ. ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ವೆಲ್ಡಿಂಗ್ ಕೋರ್ಸ್ನ್ನು ಆರಂಭಿಸಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದರು.
65 ಲಕ್ಷ ರುಪಾಯಿ ವೆಚ್ಚದಲ್ಲಿ ಕಟ್ಟಡ ಮೊದಲಾದ ಮೂಲ ಸೌಕರ್ಯಗಳು, ಪಠ್ಯ ಸಂಬಂಧಿ ಸಲಕರಣೆಗಳು ಮತ್ತು ಯಂತ್ರೋಪಕರಣಗಳ ಖರೀದಿ ನಡೆಸಲಾಗಿದೆ. ವೆಲ್ಡಿಂಗ್ ವೃತ್ತಿಯನ್ನು ಆರಂಭಿಸಲು ರಕಾರದ ಅನುಮತಿಯನ್ನು ಕೋರಿ ಅರ್ಜಿ ಸಲ್ಲಿಸಿದು, ಶೀಘ್ರವೇ ಅನುಮತಿ ದೊರೆಯುವ ನಿರೀಕ್ಷೆ ಇದೆ. ಒಟ್ಟು ನಾಲ್ಕು ವೃತ್ತಿಯನ್ನು ಉನ್ನತೀಕರಿಸಲು ಹಾಗೂ ಕ್ವಾಲಿಟಿ ಆಫ್ ಇಂಡಿಯಾದ ಅನುಮತಿಯನ್ನು ಪಡೆಯಲು ಆಡಳಿತ ಮಂಡಳಿ ಉತ್ಸುಕವಾಗಿದೆ ಎಂದು ತಿಳಿಸಿದರು.
ಉದ್ಯೋಗ ಮತ್ತು ತರಬೇತಿ ನಿರ್ದೇಶನಾಲಯದ ಆಯುಕ್ತರಿಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಅರ್ಜಿಯನ್ನು ಇಲಾಖೆಗೆ ಸಲ್ಲಿಸಲಾಗಿದ್ದು, ಪರಿವೀಕ್ಷಣೆ ಮತ್ತು ಅನುಮತಿಯ ನಂತರ ಪ್ರವೇಶಾತಿ ಪ್ರಕ್ರಿಯೆಗಳು ಪ್ರಾರಂಭಗೊಳ್ಳಲಿದ್ದು ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಗೆ ಭೇಟಿ ನೀಡಿ ಪ್ರವೇಶ ಅರ್ಜಿಗಳನ್ನು ಪಡೆದುಕೊಳ್ಳ ಬಹುದಾಗಿದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಹಾಜರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.