ನವದೆಹಲಿ: ತಮಿಳುನಾಡು ಕಾವೇರಿ ನೀರಿಗಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾ. ದೀಪಕ್ ಮಿಶ್ರಾ ಮತ್ತು ನ್ಯಾ. ಉದಯ್ ಲಲಿತ್ ಅವರನ್ನೊಳಗೊಂಡ ಪೀಠ ಮಂಗಳವಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ತೀರ್ಪು ನೀಡಿದೆ. ಸೆ.21 ರಿಂದ 27 ರವರೆಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ನಂತೆ ಒಟ್ಟು 42 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಕರ್ನಾಟಕಕ್ಕೆ ಸೂಚಿಸುವ ಮೂಲಕ ಮತ್ತೊಮ್ಮೆ ಭಾರೀ ನಿರಾಸೆಗೊಳಗಾಗುವಂತಾಗಿದೆ.
ಕರ್ನಾಟಕದ ಪರ ವಾದ ಮಂಡಿಸಿದ ಫಾಲಿ ಎಸ್. ನಾರಿಮನ್, ಅಂಕಿ ಅಂಶಗಳ ಸಹಿತ ವಾದ ಮಂಡಿಸಿದ್ದರು. ಆದರೆ ಕರ್ನಾಟಕದ ವಾದಕ್ಕೆ ಮನ್ನಣೆ ನೀಡದ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ತೀರ್ಪು ನೀಡಿ, ಸೆ.28 ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ತಮಿಳುನಾಡು ಕಾವೇರಿ ನೀರಿಗಾಗಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಹಾಗೂ 2 ರಾಜ್ಯಗಳಲ್ಲಿ ಸುಪ್ರೀಂಕೋರ್ಟ್ ಆದೇಶದ ಬಳಿಕ ಉಂಟಾದ ದಾಂಧಲೆ ಪ್ರತಿಭಟನೆಗಳ ಬಗ್ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿತ್ತು.
ಮಂಡ್ಯ, ಮೈಸೂರುಗಳಲ್ಲಿ ಪ್ರತಿಭಟನೆಯ ಕಿಚ್ಚು ಹತ್ತಿದ್ದು, ಸರ್ಕಾರ ನೀರು ಬಿಡುವುದನ್ನು ನಿಲ್ಲಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.