ವಿಜಯವಾಡ: ಹಲವು ಸಾಂಕ್ರಾಮಿಕ ಕಾಯಿಲೆಗಗಳನ್ನು ತಡೆಗಟ್ಟುವ ಮೂಲಕ ಅವುಗಳನ್ನು ಬೇರು ಸಹಿತ ನಾಶ ಮಾಡುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ರಾಜ್ಯದ ಮುಖ್ಯಮಂತ್ರಿ, ಗ್ರಾಮದ ಸರಪಂಚ್ಗಳು, ಮುಖ್ಯ ಕಾರ್ಯದರ್ಶಿಗಳು ಈ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ರಾಜ್ಯದಲ್ಲಿನ ಸೊಳ್ಳೆಗಳನ್ನು ತೊಡೆದು ಹಾಕಿ ಪರಿಸರದ ಸ್ವಚ್ಛತೆಯನ್ನು ಕಾಪಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ನಾಯ್ಡು ಅವರು ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರತಿ ಜಿಲ್ಲೆಯಲ್ಲಿ ಓರ್ವ ಐಎಎಸ್ ಅಧಿಕಾರಿಯನ್ನು ನೇಮಿಸಲಾಗುತ್ತಿದ್ದು, ಅವರು ಈ ಕಾರ್ಯವನ್ನು ಸಂಘಟಿಸಲಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.
ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಮತ್ತು ಅವುಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ನೀಡಲಾಗುವುದು. ಈ ಬಗ್ಗೆ ಪ್ರಚಾರ ರ್ಯಾಲಿಗಳನ್ನೂ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.