ನವದೆಹಲಿ : ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ಗೆ ರಷ್ಯಾ ಬೆಂಬಲ ವ್ಯಕ್ತಪಡಿಸಿದ್ದು, ಪಾಕಿಸ್ಥಾನದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸುವಂತೆ ಆಗ್ರಹಿಸಿದೆ.
ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ಮೂಲಕ 7 ಉಗ್ರರ ನೆಲೆಗಳನ್ನು ಧ್ವಂಸಗೈದು 38 ಉಗ್ರರು ಸೇರಿದಂತೆ 2 ಪಾಕ್ ಸೈನಿಕರನ್ನು ಹತ್ಯೆಗೈದ ಭಾರತೀಯ ಸೇನೆಯ ಕಾರ್ಯವನ್ನು ಶ್ಲಾಘಿಸಿದ ರಷ್ಯಾ ಪಾಕಿಸ್ಥಾನಕ್ಕೆ ತನ್ನ ನೆಲದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಹತ್ತಿಕ್ಕಲು ಆಗ್ರಹಿಸಿದೆ.
ಭಾರತದಲ್ಲಿನ ರಷ್ಯಾ ರಾಯಭಾರಿ ಅಲೆಕ್ಸಾಂಡರ್ ಎಂ. ಕದಾಕಿನ್ ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದು, ನಾವು ಎಂದಿಗೂ ಭಾರತಕ್ಕೆ ಬೆಂಬಲ ನೀಡುತ್ತೇವೆ. ಗಡಿಗಳಲ್ಲಿನ ಭಯೋತ್ಪಾದನೆಯನ್ನು ನಿಗ್ರಹಿಸಲು ನಾವು ಸಾಥ್ ನೀಡುತ್ತೇವೆ. ಭಾರತೀಯ ಸೇನೆಯ ಪರಾಕ್ರಮ ನಿಜಕ್ಕೂ ಶ್ಲಾಘನೀಯ. ಪಾಕ್ ಇನ್ನಾದರೂ ಎಚ್ಚೆತ್ತುಕೊಂಡು ತನ್ನ ನೆಲದಲ್ಲಿನ ಭಯೋತ್ಪಾದನಾ ಚಟುವಟಿಕೆಗಳನ್ನು ಹತ್ತಿಕ್ಕಲು ಪರಿಣಾಮಕಾರಿ ಹೆಜ್ಜೆಗಳನ್ನು ಇಡಬೇಕಿದೆ.
ಇತ್ತೀಚೆಗಷ್ಟೇ ರಷ್ಯಾ ಮತ್ತು ಪಾಕಿಸ್ಥಾನ ಜಂಟಿ ಸಮರಾಭ್ಯಾಸ ನಡೆಸಿತ್ತು. ಇದಕ್ಕಾಗಿ ಭಾರತ ಆತಂಕ ಪಡಬೇಕಾಗಿಲ್ಲ. ಇದು ಉಭಯ ದೇಶಗಳ ಸೇನಾ ನಡುವಿನ ಸಾಮಾನ್ಯ ಸಮರಾಭ್ಯಾಸವಾಗಿತ್ತು. ಪಾಕಿಸ್ಥಾನವು ಭಯೋತ್ಪಾದಕ ಕೃತ್ಯಗಳಿಗೆ ಬೆಂಬಲ ನೀಡಬಾರದು. ತನ್ನ ಸೇನೆಯನ್ನು ಈ ಕೃತ್ಯಗಳಿಗೆ ಬಳಸಿಕೊಳ್ಳಬಾರದು ಎಂದು ತಿಳಿಸುವ ಪಾಠ ಈ ಸಮರಾಭ್ಯಾಸವಾಗಿತ್ತು.
ಮಾನವ ಹಕ್ಕುಗಳ ಉಲ್ಲಂಘನೆ ಮಾಡಿ, ಸೇನಾ ಶಿಬಿರಗಳು, ಶಾಂತಿಯುತ ನಾಗರಿಕರ ಮೇಲೆ ಭಯೋತ್ಪಾದಕರು ದಾಳಿ ಮಾಡಿದಾಗ ಪ್ರತಿ ದೇಶವೂ ತನ್ನ ಸ್ವ ರಕ್ಷಣೆಯನ್ನು ಮಾಡಿಕೊಳ್ಳುವ ಹಕ್ಕನ್ನು ಹೊಂದಿದೆ. ಭಾರತದ ಸರ್ಜಿಕಲ್ ಸ್ಟ್ರೈಕ್ಗೆ ನಮ್ಮ ಬೆಂಬಲವಿದೆ ಎಂದು ಹೇಳಿದರು.
ಭಾರತ ಮತ್ತು ಪಾಕಿಸ್ಥಾನದ ನಡುವೆ ಗಡಿ ನಿಯಂತ್ರಣ ರೇಖೆಯಲ್ಲಿ ಉಲ್ಬಣಿಸುತ್ತಿರುವ ಪರಿಸ್ಥಿತಿಯ ಕುರಿತು ನಮಗೆ ಕಾಳಜಿ ಇದೆ. ಪಾಕಿಸ್ಥಾನ ತನ್ನ ಭೂಪ್ರದೇಶದಲ್ಲಿ ಭಯೋತ್ಪಾದಕ ಸಂಘಟನೆಯ ಚಟುವಟಿಕೆಗಳನ್ನು ನಿಲ್ಲಿಸಲು ಪರಿಣಾಮಕಾರಿ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ಆಶಿಸುತ್ತೇವೆ ಎಂದು ಭಾರತದಲ್ಲಿನ ರಷ್ಯಾ ರಾಯಭಾರಿ ಅಲೆಕ್ಸಾಂಡರ್ ಎಂ. ಕದಾಕಿನ್ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.