ಬಂಟ್ವಾಳ : ಶ್ರೀ ಶಾರದಾ ಸೇವಾ ಪ್ರತಿಷ್ಠಾನ ತುಂಬೆ ಇದರ ಆಶ್ರಯದಲ್ಲಿ ನಡೆಯುವ 16 ನೇ ವರ್ಷದ ಶ್ರೀ ಶಾರದಾ ಮಹೋತ್ಸವವನ್ನು ವಿಜಯ ಬ್ಯಾಂಕ್ ತುಂಬೆಯ ಶಾಖಾಧಿಕಾರಿ ಶ್ರೀ ವೈ. ಆರ್. ದಾಮ್ಲೆಯವರು ಧ್ವಜಾರೋಹಣ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಆಮೇಲೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವು ವಿಧಾನ ಪರಿಷತ್ನ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ರವೀಂದ್ರ ಕಂಬಳಿ, ಶ್ರೀ ವೈ ಆರ್ ದಾಮ್ಲೆ, ಬಂಟ್ವಾಳ ಪುರಸಭೆಯ ಅಧ್ಯಕ್ಷ ರಾಮಕೃಷ್ಣ ಆಳ್ವ ಪೊನ್ನೋಡಿ, ಮೇರಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ನಾಯ್ಕ್, ಬಿ ಜೆ ಪಿ ಮಂಡಲ ಅಧ್ಯಕ್ಷರಾದ ಸಂತೋಷ್ ಕುಮಾರ ರೈ ಬೋಳಿಯಾರ್, ಗ್ಯಾರೇಜ್ ಮಾಲಕರ ಸಂಘ ಬಂಟ್ವಾಳ್ ಅಧ್ಯಕ್ಷರಾದ ರಮೇಶ್ ಕುಮಾರ್, ಎಲ್ ಐ ಸಿ ವಿಸ್ತರಣಾಧಿಕಾರಿ ಮನೋಜ್ ಕುಮಾರ್, ಉತ್ಸವದ ಅಧ್ಯಕ್ಷರಾದ ಗೋಪಾಲ್ ಮೈಂದನ್, ಶ್ರೀ ಶಾರದಾ ಸೇವಾ ಪ್ರತಿಷ್ಠಾನ ತುಂಬೆ ಇದರ ಅಧ್ಯಕ್ಷರು ಗಣೇಶ್ ಸುವರ್ಣ ಕೋಶಾಧಿಕಾರಿ ಸೋಮಪ್ಪ ಕೋಟ್ಯಾನ್, ಹಿರಿಯರಾದ ಸೀತಾರಾಮ ಬೆಲ್ಚಡ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ಶಾರದಾ ಸೇವಾ ಪ್ರತಿಷ್ಠಾನ ತುಂಬೆ ಇದರ ಪ್ರದಾನ ಕಾರ್ಯದರ್ಶಿ ಪ್ರವೀಣ್ ಬಿ. ತುಂಬೆಯವರು ಸ್ವಾಗತಿಸಿದರು, ಯೋಗೇಶ್ ಕಜೆಕಂಡ ವಂದಿಸಿದರು, ಜಗದೀಶ್ ಕಡೆಗೋಳಿ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.