ಕೋಲಾರ: ಕೋಲಾರದ ಮಾಲೂರು ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ ಆತ್ಮಹತ್ಯೆಗೆ ಶರಣಾಗಿದ್ದು, ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಮುಂದುವರೆದಿದೆ.
ಇನ್ಸ್ಪೆಕ್ಟರ್ ರಾಘವೇಂದ್ರ ಅವರು ರಾತ್ರಿ ವೇಳೆ ತಮ್ಮ ಸೇವೆಯ ನಿಮಿತ್ತ ಮಾಲೂರು ಠಾಣೆಯ ತಮ್ಮ ಕಚೇರಿಗೆ ತೆರಳಿದ್ದು, ತಮ್ಮಲ್ಲಿದ್ದ ಸರ್ವೀಸ್ ರಿವಾಲ್ವರ್ನಿಂದ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ರಾಘವೇಂದ್ರ ಅವರು ಡೆತ್ನೋಟ್ನಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆದಿದ್ದಾರೆ ಎನ್ನಲಾಗಿದ್ದು, ಇದರ ನಿಖರ ಮಾಹಿತಿ ತಿಳಿದು ಬಂದಿಲ್ಲ.
ಇನ್ಸ್ಪೆಕ್ಟರ್ ರಾಘವೇಂದ್ರ ಅವರು ಮೂಲತಃ ನರಸಾಪುರದವರು ಎಂದು ಹೇಳಲಾಗಿದ್ದು, 2003ನೇ ಬ್ಯಾಚ್ನ ಅಧಿಕಾರಿಯಾಗಿದ್ದರು. ಅವರು ಈ ಹಿಂದೆ ಸರ್ಜಾಪುರ ನಂದಗುಡಿಯಲ್ಲಿ ಸೇವೆ ಸಲ್ಲಿಸಿದ್ದು, 2012-14ರ ಅವಧಿಯಲ್ಲಿ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸರ್ಜಾಪುರ ಠಾಣೆಯಲ್ಲಿ ಎಸ್ಐ ಆಗಿ ಸೇವೆ ಸಲ್ಲಿಸಿದ್ದರು.
ರಾಘವೇಂದ್ರ ಅವರು ಇಸ್ಟೇಸ್ಟ್ ದಂಧೆಯಲ್ಲಿ ಭಾಗಿಯಾರುವ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, ಹೈಕೋರ್ಟ್ನಲ್ಲಿ ಇದರ ವಿಚಾರಣೆ ನಡೆಯುತ್ತಿದೆ ಮಾಹಿತಿ ಇದೆ. ಈ ಸಂಬಂಧ ಜೈಲಿಗೂ ಹೋಗಿರುವ ರಾಘವೇಂದ್ರ ಅವರ ಮೇಲೆ ಮರಳು ಮಾಫಿಯಾ ಒತ್ತಡವೂ ಇತ್ತು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.