ವಿಶ್ವಸಂಸ್ಥೆ: ಭಯೋತ್ಪಾದಕ ಸಂಘಟನೆಗಳು ರಾಸಾಯನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿರುವ ಅಥವಾ ಸ್ವಾಧೀನಪಡಿಸಿಕೊಳ್ಳುತ್ತಿರುವುದರ ವಿರುದ್ಧ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ, ಭವಿಷ್ಯದಲ್ಲಿ ಇಂತಹ ಶಸ್ತ್ರಾಸ್ತ್ರಗಳ ಬಳಕೆಯ ಸಾಧ್ಯತೆಯನ್ನು ತಡೆಗಟ್ಟಲು ಅಂತಾರಾಷ್ಟ್ರೀಯ ಸಮುದಾಯ ತುರ್ತು ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದೆ.
ರಾಸಾಯನಿಕ ಶಸ್ತ್ರಾಸ್ತ್ರಗಳ ಬಳಕೆ ಯಾವುದೇ ಸಂದರ್ಭದಲ್ಲಿ ಯಾರಿಂದಲೂ ಬಳಕೆಯಾಗುವುದನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇಂತಹ ಅಸಹ್ಯಕರ ಕೃತ್ಯಗಳಿಗೆ ಕಾರಣರಾದವರನ್ನು ಜವಾಬ್ದಾರರಾಗಿಸಬೇಕು ಎಂದು ಶಸ್ತ್ರಾಸ್ತ್ರಗಳ ಸಾಮೂಹಿಕ ನಾಶ ಕುರಿತ ಸಭೆಯಲ್ಲಿ ಜಿನೇವಾದ ನಿಶಸ್ತ್ರೀಕರಣ ಸಮಾವೇಶದ ಭಾರತೀಯ ಖಾಯಂ ಪ್ರತಿನಿಧಿ ಡಿ.ಬಿ. ವೆಂಕಟೇಶ ಶರ್ಮಾ ಹೇಳಿದ್ದಾರೆ.
ಸಿರಿಯಾ ಮತ್ತು ಇರಾಕ್ನಲ್ಲಿ ಭಯೋತ್ಪಾದಕ ಸಂಘಟನೆಗಳಿಂದ ರಾಸಾಯನಿಕ ಶಸ್ತ್ರಾಸ್ತ್ರಗಳ ಸ್ವಾಧೀನ, ನಿರಂತರ ಬಳಕೆ ಮತ್ತು ವಿಷಕಾರಿ ರಾಸಾಯನಿಕ ಶಸ್ತ್ರಾಸ್ತ್ರಗಳ ವಿತರಣಾ ವ್ಯವಸ್ಥೆಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸುತ್ರದೆ. ಇದರ ತಡೆಗೆ ಅಂತಾರಾಷ್ಟ್ರೀಯ ಸಮುದಾಯ ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ನಿರೀಕ್ಷೆ ಇದೆ ಎಂದು ಶರ್ಮಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.