ನವದೆಹಲಿ: ದೇಶದಾದ್ಯಂತ ಕ್ಟೋಬರ್ 21ರಂದು ಪೊಲೀಸ್ ಸಂಸ್ಮರಣಾ ದಿನವಾಗಿ ಆಚರಿಸಲಾಗುತ್ತಿದೆ. ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಅವರು ದೆಹಲಿಯ ಚಾಣಕ್ಯಪುರಿಯಲ್ಲಿರುವ ಪೊಲೀಸ್ ಸ್ಮಾರಕದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದರು.
1959ರಲ್ಲಿ ಚೀನಾ ವಿರುದ್ಧದ ಹೋರಾಡುವ ಸಂದರ್ಭ ಭಾರತದ ಗಡಿಯಲ್ಲಿ ಪ್ರಾಣವನ್ನೇ ಸಮರ್ಪಿಸಿದ 10 ಮಂದಿ ಪೊಲೀಸ್ ಅಧಿಕಾರಿಗಳ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತಿದೆ.
ಅಕ್ಟೋಬರ್ 21, 1959ರಲ್ಲಿ ಚೀನಾ ಪಡೆಗಳು ಗಡಿಯಲ್ಲಿರುವ ಭಾರತದ 20 ಪೊಲೀಸ್ ಪಡೆಗಳ ಕ್ಯಾಂಪ್ ಮೇಲೆ ಏಕಾಏಕಿ ಗ್ರೆನೇಡ್ ದಾಳಿ ನಡೆಸಿದ್ದು, ಈ ವೇಳೆ 10 ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದರು. ಈ ವೇಳೆ ಹಲವರನ್ನು ಬಂಧಿಸಲಾಗಿದ್ದು, ಇತರ ಕೆಲವು ಪೊಲೀಸ್ ಸಿಬ್ಬಂದಿಗಳು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಅಧಿಕಾರು 1960ರಲ್ಲಿ ನಡೆಸಿದ ವಾರ್ಷಿಕ ಸಮ್ಮೇಳನದಲ್ಲಿ ಈ ದಿನವನ್ನು ದೇಶದಾದ್ಯಂತ ಪೊಲೀಸ್ ಸಂಸ್ಮರಣಾ ದಿನವಾಗಿ ಆಚರಿಸಲು ನಿರ್ಧರಿಸಲಾಯಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.