ಪುತ್ತೂರು : ತಾಲೂಕಿನ ಮುಡಿಪಿನಡ್ಕ-ಬಡಗನ್ನೂರು -ಸುಳ್ಯಪದವು ರಸ್ತೆ ದುರಸ್ತಿಗೆ ಆಗ್ರಹಿಸಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಬುಧವಾರ ರಸ್ತೆ ತಡೆಮಾಡಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ಕಳೆದ ಒಂದು ವಾರಗಳಿಂದ ರಸ್ತೆ ದುರಸ್ತಿಗಾಗಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು.ಆದರೆ ಇದಕ್ಕೆ ಯಾವುದೇ ರೀತಿಯ ಸ್ಪಂದನೆ ಸಿಕ್ಕಿರಲಿಲ್ಲ.ಹೀಗಾಗಿ ಸೋಮವಾರ ಪುತ್ತೂರು ತಾಪಂ ಆವರಣದಲ್ಲಿರುವ ಶಾಸಕಿಯವರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದರು.
ಇದೀಗ ರಸ್ತೆಯನ್ನು ಎರಡೂ ಕಡೆ ಬಂದ್ ಮಾಡಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.