ಬೆಂಗಳೂರು: ಟಿಪ್ಪು ಜಯಂತಿ ವಿರೋಧಿಸಿ ಎಲ್ಲಾ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ನಂ. 10 ರಂದು ಕರಾಳ ದಿನವನ್ನು ಆಚರಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ.
ಮಂಗಳವಾರದಂದು ಕರ್ನಾಟಕದಾದ್ಯಂತ ಹಲವೆಡೆ ಟಿಪ್ಪು ಜಯಂತಿ ವಿರೋಧಿಸಿ ಬೃಹತ್ ಪ್ರತಿಭಟನೆಯನ್ನು ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿ. ಎಸ್. ಯಡಿಯೂರಪ್ಪನವರು ಪಕ್ಷದ ಕಾರ್ಯಕರ್ತರಿಗೆ ನವೆಂಬರ್ 10 ರಂದು ಕರಾಳ ದಿನವನ್ನಾಗಿ ಆಚರಿಸಲು ಕರೆ ನೀಡಿದ್ದಾರೆ.
ಕರ್ನಾಟಕದ ಜನತೆಯ ಭಾವನೆಗಳ ವಿರುದ್ಧವಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಯನ್ನು ಆಚರಿಸಲು ಮುಂದಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಲ್ಲಿ ರಾಜ್ಯ ಸರ್ಕಾರವೇ ನೇರ ಹೊಣೆಯಾಗಲಿದೆ.
ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ, ಸರ್ಕಾರದ ವತಿಯಿಂದ ನಡೆಸಲ್ಪಡುವ ಟಿಪ್ಪು ಜಯಂತಿ ಆಚರಣೆಯನ್ನು 24 ಗಂಟೆಗಳಲ್ಲಿ ನಿಲ್ಲಿಸಲಾಗುವುದು. ಇಷ್ಟೇ ಅಲ್ಲದೆ ಬಲಪಂಥೀಯರ ಮೇಲೆ ಮಾರಣಾಂತಿಕ ದಾಳಿಗಳನ್ನು ಮಾಡುತ್ತಿರುವ ಪ್ಯಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನೂ ನಿಷೇಧಿಸಲಾಗುವುದು.
ಬಲಪಂಥೀಯ ಕಾರ್ಯಕರ್ತರ ಮೇಲೆ ಮಾರಣಾಂತಿಕ ದಾಳಿಗಳು ಮತ್ತು ಟಿಪ್ಪು ಜಯಂತಿ ಆಚರಣೆ ನಿರ್ಧಾರದ ನಡುವೆ ಕೊಂಡಿಯಿದೆ. ಈ ಕುರಿತು ರಾಜ್ಯ ಬಿಜೆಪಿ ತಂಡ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ವರದಿಯನ್ನು ನೀಡಲಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.