ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತರಿಸಲು ಉದ್ದೇಶಿಸಿರುವ ರಸ್ತೆ ಸುರಕ್ಷತಾ ಮಸೂದೆಯನ್ನು ವಿರೋಧಿಸಿ ದೇಶದಾದ್ಯಂತ ಸಾರಿಗೆ ನಿಗಮಗಳು ಗುರುವಾರ ಮುಷ್ಕರ ನಿರತವಾಗಿವೆ. ಈ ಹಿನ್ನಲೆಯಲ್ಲಿ ಬಸ್ಗಳು ರಸ್ತೆಗಿಳಿದಿಲ್ಲ. ಇದರಿಂದಾಗಿ ಸಾರ್ವಜನಿಕರು ದೈನಂದಿನ ಕೆಲಸಕ್ಕೆ ತೆರಳಲು ಪರದಾಡುವಂತಾಗಿದೆ.
ಕರ್ನಾಟಕದಲ್ಲೂ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರು ಮುಷ್ಕರ ನಿರತರಾಗಿದ್ದಾರೆ. ಇದರಿಂದ ಬೆಂಗಳೂರು ಸೇರಿದಂತೆ ವಿವಿಧೆಡೆ ಸಾರಿಗೆ ಸಂಪೂರ್ಣ ಬಂದ್ ಆಗಿದೆ.
ರಸ್ತೆ ಸಾರಿಗೆ ಮತ್ತು ಸುರಕ್ಷತಾ ಮಸೂದೆ 2015 ಜಾರಿಯಿಂದ ಸಾರಿಗೆ ಇಲಾಖೆ ಮತ್ತು ಕಾರ್ಮಿಕರಿಗೆ ತೀವ್ರ ಕಷ್ಟ ಉಂಟಾಗಲಿದೆ ಎಂಬ ಕಾರಣಕ್ಕೆ ಎಡಪಂಥೀಯ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ಗೆ ಕರೆ ನೀಡಿವೆ. ಇದಕ್ಕೆ ದೇಶದ ೫೪ ಸಾರಿಗೆ ನಿಗಮಗಳು ಸಾಥ್ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.