ಬೆಂಗಳೊರು: ಕೆಎಸ್ಆರ್ಟಿಸಿಯ ಶಿಕ್ಷಣ, ಕಲೆ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಹೊಸದಾಗಿ ನೇಮಕಗೊಂಡ 1,350 ನೌಕರರಲ್ಲಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಡ್ರೈವರ್ಗಳಾಗಿ ನೇಮಕ ಮಾಡಲು ಕೆಎಸ್ಆರ್ಟಿಸಿ ಆದೇಶ ಹೊರಡಿಸಿದೆ.
ಅಮ್ಮೆನಮ್ಮ ಹಾಗೂ ವೀಣಾ ಹೂಸಮ್ಮ ಮೂಲತಃ ಬೀದರ್ ಮತ್ತು ಚಿಕ್ಕಾಬಳ್ಳಾಪುರ ಜಿಲ್ಲೆಯವರಾಗಿದ್ದಾರೆ. ಒಟ್ಟು 2,955 ಅಭ್ಯರ್ಥಿಗಳನ್ನು ಕೆಎಸ್ಆರ್ಟಿಸಿಯ ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡಲಾಗಿದೆ.
ಅಮ್ಮೆನ್ನಮ್ಮ ನಡಾಫ್ ತುಮಕೂರು ಜಿಲ್ಲೆಯನ್ನು ಆಯ್ಕೆ ಮಾಡಿದರೆ, ವೀಣಾ ಅವರು ದೊಡ್ಡಬಳ್ಳಾಪುರ ಜಿಲ್ಲೆಯನ್ನು ಆಯ್ಕೆ ಮಾಡಿದ್ದಾರೆ.
ಮುಂಬರುವ ದಿನಗಳಲ್ಲಿ ಕೆಎಸ್ಆರ್ಟಿಸಿ ಹಲವು ಯೋಜನೆಗಳನ್ನು ಜಾರಿಮಾಡುವುದಾಗಿ ಹೇಳಿದ್ದು, ಅವುಗಳಲ್ಲಿ 25 ಜೈವಿಕ ಡೀಸಲ್ ಬಸ್ಸುಗಳನ್ನು ಆರಂಭಿಸುವುದು, ಕಾರ್ಪೊರೇಷನ್ನ ಎಲ್ಲಾ ಡಿಪೊಗಳಲ್ಲಿ, ಪ್ರಾದೇಶಿಕ ಕಾರ್ಯಾಗಾರದಲ್ಲಿ ಸಿಸಿಟಿವಿ ಅಳವಡಿಕೆ ಮತ್ತು ಹೊಸ ಬಸ್ ನಿಲ್ದಾಣ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳುವುದು ಪ್ರಮುಖವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.