ನವದೆಹಲಿ : ಆಯ್ದ ಪೆಟ್ರೋಲ್ ಬಂಕ್ಗಳಲ್ಲಿ 2000 ರೂಪಾಯಿಗಳನ್ನು ವಿತ್ಡ್ರಾ ಮಾಡಬಹುದು ಎಂದು ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ದೂರದರ್ಶನ ಟ್ವೀಟ್ ಮಾಡಿದೆ.
ಪೆಟ್ರೋಲ್ ಬಂಕ್ಗಳಲ್ಲಿ ಹಣ ದೊರೆಯಲಿರುವ ಯೋಜನೆ ಕುರಿತು ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ದೂರದರ್ಶನ ಟ್ವೀಟ್ ಮಾಡಿದ್ದು, ರೂ. 500 ಮತ್ತು 1,000 ನೋಟಿನ ಮೇಲೆ ನಿಷೇಧ ಹೇರಿದ್ದರಿಂದ ಜನರು ಬ್ಯಾಂಕ್ ಮತ್ತು ಎಟಿಎಂಗಳ ಎದುರು ಕ್ಯೂ ನಿಂತು ಸಮಸ್ಯೆ ಎದುರಿಸುತ್ತಿದ್ದಾರೆ. ಜನರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು ಹಾಕಿಕೊಂಡಿದ್ದು, ಆಯ್ದ ಪೆಟ್ರೋಲ್ ಬಂಕ್ಗಳಲ್ಲಿ ಪ್ರತಿಯೊಬ್ಬರು ದಿನಕ್ಕೆ 2000 ರೂಪಾಯಿಗಳನ್ನು ವಿತ್ಡ್ರಾ ಮಾಡಬಹುದು ಎನ್ನಲಾಗಿದೆ.
Rs. 2000 per person per day in cash can be dispensed.Facility to be extended to over 20,000 petrol pumps
— Doordarshan News (@DDNewsLive) November 17, 2016
Govt: Cash to be dispensed at 2500 petrol pumps; Cash to be given by swiping of debit/credit card via POS machine pic.twitter.com/Rw5ccwK9K0
— Doordarshan News (@DDNewsLive) November 17, 2016
ಜನರು ತಮ್ಮ ಬಳಿ ಇರುವ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ಗಳನ್ನು ಸ್ಪೈಪ್ ಮಾಡಿ ರೂ. 2000 ಹಣವನ್ನು ವಿತ್ಡ್ರಾ ಮಾಡಬಹುದಾಗಿದೆ.
ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರಗತಿಯಲ್ಲಿ ಪರಿಹಾರ ದೊರಕಿಸಿಕೊಡಲು ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ದೇಶದಾದ್ಯಂತ ಸುಮಾರು 2,500 ಪೆಟ್ರೋಲ್ ಬಂಕ್ಗಳಲ್ಲಿ ಈ ಸೌಲಭ್ಯ ಲಭ್ಯವಿರಲಿದೆ. ಮುಂದಿನ ದಿನಗಳಲ್ಲಿ ಸುಮಾರು 20,000 ಪೆಟ್ರೋಲ್ ಬಂಕ್ಗಳಲ್ಲಿ ಈ ಯೋಜನೆಯನ್ನು ವಿಸ್ತರಿಸುವ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.