ನವದೆಹಲಿ : ನೋಟು ರದ್ಧತಿ ಕುರಿತು ಮೈಕ್ರೋಸಾಫ್ಟ್ನ ಸ್ಥಾಪಕ ಬಿಲ್ ಗೇಟ್ಸ್ ಅವರು ‘ಇದೊಂದು ದಿಟ್ಟ ನಡೆ’ ಎನ್ನುವ ಮೂಲಕ ಪ್ರಧಾನಿ ಮೋದಿಯವರನ್ನು ಬೆಂಬಲಿಸಿದ್ದಾರೆ.
ರೂ. 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ಭಾರತ ಸರ್ಕಾರದ ಕ್ರಮಕ್ಕೆ ಬಹಳಷ್ಟು ಜನರು ದೇಶ-ವಿದೇಶಗಳಲ್ಲಿರುವ ಆರ್ಥಿಕ ತಜ್ಞರು, ಉದ್ಯಮಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಮೋದಿ ಸರ್ಕಾರ ತೆಗೆದುಕೊಂಡ ಕ್ರಮಕ್ಕೆ ಮೈಕ್ರೋಸಾಫ್ಟ್ನ ಸ್ಥಾಪಕ ಬಿಲ್ ಗೇಟ್ಸ್ ಅವರು ಕೂಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನೀತಿ ಆಯೋಗ ಆಯೋಜಿಸಿದ್ದ ಟ್ರಾನ್ಸ್ಫಾರ್ಮಿಂಗ್ ಇಂಡಿಯಾ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬಿಲ್ ಗೇಟ್ಸ್, ಕಪ್ಪು ಹಣವನ್ನು ತಡೆಗಟ್ಟಲು ರೂ. 500 ಮತ್ತು 1000 ಬೆಲೆಗಳ ನೋಟುಗಳನ್ನು ನಿಷೇಧಿಸಿರುವುದು ದಿಟ್ಟ ನಡೆ. ಡಿಜಿಟಲ್ ವಹಿವಾಟು ನಡೆಸುವುದರಿಂದ ಪಾರದರ್ಶಕತೆ ಇರುತ್ತದೆ. ಕಪ್ಪುಹಣವನ್ನು ಇದರಿಂದ ತಡೆಗಟ್ಟಬಹುದು. ಕೇಂದ್ರ ಸರ್ಕಾರದ ಈ ದಿಟ್ಟ ನಡೆಯಿಂದ ಭಾರತದಲ್ಲಿ ಕಪ್ಪು ಹಣದ ಆರ್ಥಿಕತೆಗೆ ಅಂತ್ಯ ಬರಲಿದೆ. ರೂ. 500 ಮತ್ತು 1000 ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಷೇಧಿಸಿ ಹೊಸ ನೋಟುಗಳನ್ನು ಪರಿಚಯಿಸಿರುವ ಪ್ರಧಾನಿ ಮೋದಿಯವರ ಈ ದಿಟ್ಟ ನಡೆ ಭಾರತದಲ್ಲಿ ಕಪ್ಪು ಹಣವನ್ನು ನಿಯಂತ್ರಿಸಲು ಸಹಾಯಕವಾಗಲಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.