ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಡಿಸೆಂಬರ್ 3 ಮತ್ತು 4ರಂದು ಅಮೃತಸರದಲ್ಲಿ ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ದೃಢಪಡಿಸಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಈ ವಿಚಾರವನ್ನು ಖಚಿತಪಡಿಸಿದ್ದು, ಭಯೋತ್ಪಾದನೆ ಮತ್ತು ಮಾತುಕತೆ ಜೊತೆಯಲ್ಲೇ ನಡೆಯಲು ಸಾಧ್ಯವಿಲ್ಲ ಎಂದು ಹೇಳೀದ್ದಾರೆ. ಈ ವೇಳೆ ಪಾಕಿಸ್ಥಾನದ ಜೊತೆಗಿನ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ಪಾಕಿಸ್ಥಾನ ದ್ವಿಪಕ್ಷೀಯ ಮಾತುಕತೆಗೆ ಅಗತ್ಯ ವಾತಾವರಣವನ್ನು ಸೃಷ್ಟಿಸುವ ಅಗತ್ಯವಿದೆ ಎಂದು ಸ್ವರೂಪ್ ಹೇಳಿದ್ದಾರೆ.ಪ
ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, 40 ರಾಷ್ಟ್ರಗಳು ಸಮ್ಮೇಳನದಲ್ಲಿ ಭಾಗವಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.