ಹುಬ್ಬಳ್ಳಿ: ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 2008ರಲ್ಲಿ ಬಂಧಿಸಲಾಗಿದ್ದ 17 ಮಂದಿ ಶಂಕಿತ ಸಿಮಿ ಉಗ್ರರರನ್ನು ಹುಬ್ಬಳ್ಳಿಯ ಸೆಷನ್ಸ್ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.
ಸತತ 7 ವರ್ಷ ಇವರನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಒಟ್ಟು 278 ಸಾಕ್ಷಿಗಳ ವಿಚಾರಣೆ ನಡೆಸಿದೆ. ಇದೀಗ ಸೂಕ್ತ ಸಾಕ್ಷ್ಯಾಧಾರಗಳ ಕೊರೆತೆಯಿಂದ ಎಲ್ಲಾ ಶಂಕಿತರನ್ನು ಖುಲಾಸೆಗೊಳಿಸಲಾಗಿದೆ.
ಶಂಕಿತ ಉಗ್ರರನ್ನು ಬಂಧಿಸಿದ ವೇಳೆ ಅವರ ಬಳಿ ಬಾಂಬ್, ಡಿಟೋನೇಟರ್’ಗಳು, ಬಂದೂಕು ಸೇರಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಪತ್ತೆಯಾಗಿತ್ತು. ಈಗ ಪ್ರಕರಣದ ವಿಚಾರಣೆ ಮುಗಿದಿದ್ದು ಆರೋಪಿಗಳು ಪಾರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.