ಧಾರವಾಡ: ಬೆಂಗಳೂರಿನ ಅಭಿಮಾನ ಪ್ರಕಾಶನ ಸಂಸ್ಥೆಯ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ, ವರದಿಗಳನ್ನು ಬರೆದ ಪತ್ರರ್ಕರಿಗೆ ಹಾಗೂ ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಮಾನವೀಯ ಸಮಸ್ಯೆಗಳನ್ನು ಪರಿಣಾಮಕಾರಿಗಾಗಿ ಪ್ರತಿಬಿಂಬಿಸುವ ಲೇಖನ, ವರದಿಗಳನ್ನು ಬರೆದ ಪತ್ರಕರ್ತರಿಗೆ ಪ್ರತಿವರ್ಷ ತಲಾ 10 ಸಾವಿರ ರೂ.ಗಳ ನಗದು ಪ್ರಶಸ್ತಿ ನೀಡಲು ಸಂಸ್ಥೆಗಳು ತಲಾ ಒಂದು ಲಕ್ಷ ರೂ.ಗಳ ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿದೆ.
2016 ಜನವರಿ ತಿಂಗಳ ಪ್ರಾರಂಭದಿಂದ ನವೆಂಬರ್ ಅಂತ್ಯದವರೆಗೆ ಪ್ರಕಟವಾಗಿರುವ ಸಾಮಾಜಿಕ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಲೇಖನ ವರದಿ ಅಭಿಮಾನಿ ಪ್ರಶಸ್ತಿ -2016 ಎಂದು ದಾಖಲಿಸಿ ಹಾಗೂ ಇದೇ ಅವಧಿಯ ಮಾನವೀಯ ಸಮಸ್ಯೆಗಳನ್ನು ಪ್ರತಿಬಿಂಬಿಸುವ ಒಂದು ಲೇಖನ ವರದಿಯನ್ನು ಮೈಸೂರು ದಿಗಂತ ಪ್ರಶಸ್ತಿ-2016 ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.
ಕನ್ನಡ ದೈನಿಕ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಬರೆದಿರುವ ವರದಿ ಲೇಖನಿಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ. ಲೇಖನ, ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು.
ಲೇಖನ, ವರದಿಗಳನ್ನು ಡಿಸೆಂಬರ್ 26ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಅಭಿಮಾನಿ ಪ್ರಶಸ್ತಿ-2016 ಹಾಗೂ ಮೈಸೂರು ದಿಗಂತ ಪ್ರಶಸ್ತಿ-2016 ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ.ಬಿ.ಆರ್ ಅಂಬೇಡ್ಕರ್ ಬೀದಿ ಬೆಂಗಳೂರು-560001 ಇವರಿಗೆ ಕಳುಹಿಸಲು ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಎಂ.ಸಿದ್ದರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.