ಸುಳ್ಯ : ಐವರ್ನಾಡು ಗ್ರಾಮ ಪಂಚಾಯಿತಿ ಎದುರಿನಲ್ಲಿ ನಿರ್ಮಿಸಿದ ನೂತನ ಬಸ್ ತಂಗುದಾಣದ ಉದ್ಘಾಟನೆಯನ್ನು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪಾಲೆಪ್ಪಾಡಿ ಗಣಪಯ್ಯ ಭಟ್ ನೆರವೇರಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಸಾರಕೆರೆ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಜಿಲ್ಲಾ ಪಂಚಾಯಿತಿ ಸದಸ್ಯ ನವೀನ್ಕುಮಾರ್ ಮೇನಾಲ, ಸುಳ್ಯ ಎಪಿಎಂಸಿ ಅಧ್ಯಕ್ಷ ಶ್ರೀರಾಮ ಪಾಟಾಜೆ, ಸುಳ್ಯ ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಚಂದ್ರಾ ಕೋಲ್ಚಾರ್, ಹಿರಿಯರಾದ ನೆಕ್ರಪ್ಪಾಡಿ ಕೃಷ್ಣಪ್ಪ ಗೌಡ, ಗ್ರಾಮ ಪಂಚಾಯಿತಿ ಸದಸ್ಯರಾದ ಶೇಖರ್ ಮಡ್ತಿಲ, ಜಯಪ್ರಕಾಶ್ ನೆಕ್ರಪ್ಪಾಡಿ, ರಾಜೇಶ್ ಭಟ್, ಬಾಬು ಕುಳ್ಳಂಪಾಡಿ, ವೇದಾವತಿ ಜಬಳೆ, ಪೂವಮ್ಮ ನನ್ಯಡ್ಕ ಮತ್ತಿತರರು ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಸ್ವಾಗತಿಸಿ, ವಂದಿಸಿದರು.
ದಿ.ಚಾತುಬಾಯಿ ಕೂಸಪ್ಪ ಗೌಡರ ಸ್ಮರಣಾರ್ಥ ಅವರ ಪುತ್ರ ಗ್ರಾಮ ಪಂಚಾಯಿತಿ ಸದಸ್ಯ ಸಿ.ಕೆ.ನವೀನ್ ಚಾತುಬಾಯಿ ಬಸ್ ತಂಗುದಾಣವನ್ನು ಕೊಡುಗೆಯಾಗಿ ನೀಡಿದ್ದಾರೆ. ಸುಮಾರು ಒಂದು ಲಕ್ಷ ರೂ ವೆಚ್ಚದಲ್ಲಿ ಆಧುನಿಕ ವಿನ್ಯಾಸದ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.