ನವದೆಹಲಿ: ಪಾಕಿಸ್ಥಾನ ಭಾರತದ ಆಂತರಿಕ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದನ್ನು ಬಿಟ್ಟು, ತನ್ನ ದೇಶದ ಸಮಸ್ಯೆಗಳತ್ತ ಗಮನಹರಿಸುವುದು ಒಳ್ಳೆಯದು ಎಂದು ಗೃಹಸಚಿವ ರಾಜನಾಥ್ ಸಿಂಗ್ ಶನಿವಾರ ಹೇಳಿದ್ದಾರೆ.
ಜಮ್ಮು ಕಾಶ್ಮೀರ ಒಂದು ವಿವಾದಿತ ಪ್ರದೇಶ. ಅಲ್ಲಿ ಒಂದು ಸಮುದಾಯಕ್ಕಾಗಿ ಪ್ರತ್ಯೇಕ ಟೌನ್ಶಿಪ್ನ್ನು ನಿರ್ಮಿಸುವುದರಿಂದ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಪಾಕಿಸ್ಥಾನ ಈ ಹಿಂದೆ ಹೇಳಿತ್ತು.
ಇದಕ್ಕೆ ಪ್ರತ್ಯುತ್ತರ ನೀಡಿರುವ ಸಿಂಗ್ ‘ಪಾಕಿಸ್ಥಾನ ತನ್ನ ಬಗ್ಗೆ ಚಿಂತಿಸಬೇಕೇ ಹೊರತು, ಭಾರತದ ಆಂತರಿಕ ವಿಷಯದಲ್ಲಿ ಮಧ್ಯಪ್ರವೇಶಿಸಬಾರದು. ಭಾರತದ ವಿಷಯದಲ್ಲಿ ಯಾವುದೇ ದೇಶದ ಮಧ್ಯಪ್ರವೇಶವನ್ನೂ ನಾವು ಒಪ್ಪುವುದಿಲ್ಲ’ ಎಂದಿದ್ದಾರೆ.
ವಿತ್ತ ಸಚಿವ ಅರುಣ್ ಜೇಟ್ಲಿ ಕೂಡ ಪಾಕಿಸ್ಥಾನದ ಹೇಳಿಕೆಯನ್ನು ಖಂಡಿಸಿದ್ದು, ಮುಸ್ಲಿಂ ಮತ್ತು ಸಿಖ್ಖರೊಂದಿಗೆ ಹಿಂದೂಗಳು ಕೂಡ ಜಮ್ಮು ಕಾಶ್ಮೀರದ ಅವಿಭಾಜ್ಯ ಅಂಗ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.