ಚಿಕ್ಕಮಗಳೂರು: ಇಲ್ಲಿಯ ಮೂಡಿಗೆರೆ ತಾಲೂಕಿನ ಅಲೇಖನ ಹೊರಟ್ಟಿ ಗ್ರಾಮದ ಶಾಲಾ ವಿದ್ಯಾರ್ಥಿನಿ ಎ.ಜಿ. ನಮನ್ ತನ್ನ ಗ್ರಾಮದಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಪ್ರಧಾನಿಯವರ ಸ್ಪಂದನೆ ದೊರೆತಿದೆ.
35 ಕುಟುಂಬಗಳ 300 ಜನರಿರುವ ಈ ಗ್ರಾಮ ಮೋಟಾರು ವಾಹನಗಳ ಸಂಚಾರಕ್ಕೆ ಸೂಕ್ತ ರಸ್ತೆ, ಆರೋಗ್ಯ ವ್ಯವಸ್ಥೆಗೆ ಆರೋಗ್ಯ ಕೇಂದ್ರ, ವಿದ್ಯುತ್ ಸಂಪರ್ಕದ ಕೊರತೆ ಎದುರಿಸುತ್ತಿದೆ. ಗ್ರಾಮಸ್ಥರು, ಶಿಕ್ಷಕರ ಪ್ರೋತ್ಸಾಹದಿಂದ ಮೂಡಿಗೆರೆಯ ಬಿದ್ರಹಳ್ಳಿ ಗ್ರಾಮದ ಮೊರಾರ್ಜಿ ಧೇಸಾಯಿ ವಸತಿ ಶಾಲೆಯ 16 ವರ್ಷದ ನಮನ ಅಕ್ಟೋಬರ್ 6ರಂದು ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಳು.
ಪ್ರಧಾನಿ ಸಚಿವಾಲಯದ ಸೂಚನೆಯಂತೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು, ಶಾಸಕ ಬಿ.ಬಿ. ನಿಂಗಯ್ಯ ಅವರು ಗ್ರಾಮದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಪಡಿಸಲು ಕೇಂದ್ರದ ಅನುದಾನ ಪಡೆಯಲು ನಿರ್ಧರಿಸಿದ್ದಾರೆ.
ನಮನ ಅವರ ಕುಟುಂಬವನ್ನು ಭೇಟಿ ಮಾಡಿದ ಮೂಡಿಗೆರೆ ಶಾಸಕ ನಿಂಗಯ್ಯ ಅವರು ಗ್ರಾಮದ ಅಭಿವೃದ್ಧಿಗೆ ಕೇಂದ್ರದ ಅನುದಾನದ ನೆರವು ಪಡೆಯಲಾಗುವುದು ಎಂದು ಭರವಸೆ ನೀಡಿದ್ದಾರೆ. ಪ್ರಧಾನಿ ಕಚೇರಿ ಗ್ರಾಮದ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರಕ್ಕೆ ಕೇಳಿಕೊಂಡಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.