ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸುವ ಬಗ್ಗೆ ಗೃಹ ಸಚಿವ ರಾಜ್ನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲಖ್ನೌದಲ್ಲಿ ಆಯೋಜಿಸಲಾಗಿರುವ ಪರಿವರ್ತನ್ ರ್ಯಾಲಿಯಲ್ಲಿ ಭಾಗವಹಿಸಲಿರುವ ಅವರು, ಬಿಜೆಪಿಯ ಪರಿವರ್ತನ್ ರ್ಯಾಲಿ ಉತ್ತರ ಪ್ರದೇಶದಲ್ಲಿ ಬದಲಾವಣೆಯ ಬುನಾದಿಯನ್ನು ಹಾಕಿದೆ. ರಾಜ್ಯದಲ್ಲಿ ಬದಲಾವಣೆ ನಿಶ್ಚಿತವಾಗಿ ಬರಲಿದೆ ಎಂದು ಜನರಿಗೆ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
ಈ ಸಂದರ್ಭ ಅನಾಣ್ಯೀಕರಣ ಕುರಿತು ಮಾತನಾಡಿದ ರಾಜ್ನಾಥ್ ಸಿಂಗ್ ಅವರು, ನೋಟು ನಿಷೇಧವನ್ನು ಚುನಾವಣೆ ದೃಷ್ಟಿಯಿಂದ ಮಾಡಲಾಗಿದೆ ಎಂದು ಜನರು ತಿಳಿದುಕೊಳ್ಳಬಾರದು. ಚುನಾವಣೆಯಲ್ಲಿ ಸೋಲು-ಗೆಲುವಿನ ದೃಷ್ಟಿಯಿಂದ ನೋಟು ನಿಷೇಧ ಮಾಡಲಾಗಿಲ್ಲ. ರಾಷ್ಟ್ರದ ಹಿತಾಸಕ್ತಿಯನ್ನು ಗಮನದಲ್ಲಿರಿಸಿ, ಕಪ್ಪು ಹಣ ಮತ್ತು ಭ್ರಷ್ಟಾಚಾರ ನಿಯಂತ್ರಿಸುವ ಉದ್ದೇಶದಿಂದ ನೋಟು ನಿಷೇಧ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.
ಭಯೋತ್ಪಾದನೆ ನಿಗ್ರಹಕ್ಕೆ ನೋಟು ನಿಷೇಧ ಸಹಾಯಕವಾಗಿದ್ದು, ನಕ್ಸಲರ ಹಲವಾರು ಬ್ಯಾಂಕ್ ಖಾತೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ನಾಥ್ ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.